
ಜೈಲು (ಪ್ರಾತಿನಿಧಿಕ ಚಿತ್ರ)
ದೊಡ್ಡಬಳ್ಳಾಪುರ: ಚಿಕ್ಕಪ್ಪನಿಗೆ ಚಾಕುವಿನಿಂದ ಇರಿದಿದ್ದ ಅಪರಾಧಿ ಸಿದ್ದಲಿಂಗಸ್ವಾಮಿ ಎಂಬುವವರಿಗೆ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ನಿರ್ಮಲಾ ಅವರು 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ತಾಲ್ಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಬೆಣಕಿನಮೊಡಗು ಗ್ರಾಮದ ನಿವಾಸಿ ಸಿದ್ದಲಿಂಗಸ್ವಾಮಿ 2019ರ ಜನವರಿಯಲ್ಲಿ ಜಮೀನು ವಿವಾದ ಹಿನ್ನೆಲೆಯಲ್ಲಿ ಈತನ ಚಿಕ್ಕಪ್ಪ ರಾಮಕೃಷ್ಣಪ್ಪಗೆ ಚಾಕುವಿನಿಂದ ಕುತ್ತಿಗೆಗೆ ಇರಿದು ಗಂಭೀರವಾಗಿ ಗಾಯಗೊಳಿಸಿದ್ದರು.
ಇದರ ದೂರು ದಾಖಲಿಸಿಕೊಂಡಿದ್ದ ಅಂದಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆ ಸಬ್‌ಇನ್‌ಸ್ಪೆಕ್ಟರ್ ಗಜೇಂದ್ರ, ಮಂಜೇಗೌಡ ಅವರು ಸಮಗ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ವರದಿ ಸಲ್ಲಿಸಿದ್ದರು. ಆರು ವರ್ಷಗಳ ವಿಚಾರಣೆ ನಂತರ ಮಂಗಳವಾರ ಸಂಜೆ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಸರ್ಕಾರಿ ಅಭಿಯೋಜಕರಾಗಿ ಟಿ.ಎನ್.ನಟರಾಜ್ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.