ADVERTISEMENT

ನೆರಳೂರು ಗ್ರಾಮ ಪಂಚಾಯಿತಿ: ಒಂದು ಮತದಿಂದ ಗೆದ್ದು ಅಧ್ಯಕ್ಷರಾದ ಮಂಜುನಾಥ್‌

ನೆರಳೂರು ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2023, 21:57 IST
Last Updated 17 ಆಗಸ್ಟ್ 2023, 21:57 IST
ಆನೇಕಲ್ ತಾಲ್ಲೂಕಿನ ನೆರಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮಂಜುನಾಥ್ ಮತ್ತು ಉಪಾಧ್ಯಕ್ಷರಾಗಿ ರತ್ನಮ್ಮ ಆಯ್ಕೆಯಾದರು
ಆನೇಕಲ್ ತಾಲ್ಲೂಕಿನ ನೆರಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮಂಜುನಾಥ್ ಮತ್ತು ಉಪಾಧ್ಯಕ್ಷರಾಗಿ ರತ್ನಮ್ಮ ಆಯ್ಕೆಯಾದರು   

ಆನೇಕಲ್: ತಾಲ್ಲೂಕಿನ ನೆರಳೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಒಂದು ಮತದಿಂದ ಮಂಜುನಾಥ್‌ ಗೆಲುವು ಸಾಧಿಸಿ, ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.

ಉಪಾಧ್ಯಕ್ಷರಾಗಿ ರತ್ನಮ್ಮ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನೆರಳೂರು ಗ್ರಾಮ ಪಂಚಾಯಿತಿಯಲ್ಲಿ 63 ಸದಸ್ಯ ಬಲದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮಂಜುನಾಥ್‌ ಮತ್ತು ಪಿಳ್ಳಪ್ಪ ಅವರು ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಮಂಜುನಾಥ್‌ ಅವರು 32 ಮತಗಳನ್ನು ಪಡೆದು ಜಯಗಳಿಸಿದರು. ಪಿಳ್ಳಪ್ಪ ಅವರು 31 ಮತ ಪಡೆದು ಪರಾಭವಗೊಂಡರು.

ADVERTISEMENT

ಬೆಂಗಳೂರು ನಗರ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಸದಸ್ಯರು ಗ್ರಾಮ ಪಂಚಾಯಿತಿಯಲ್ಲಿ ಒಂದು ಮತಗಳ ಅಂತರದಿಂದ ಮಂಜುನಾಥ್‌ ಜಯ ಸಾಧಿಸಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ರತ್ನಮ್ಮ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.

ಚುನಾವಣೆ ವೇಳೆ ಕೆಲ ಕಾಲ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.