
ಪ್ರಜಾವಾಣಿ ವಾರ್ತೆ
ಬಂಧನ
ದೇವನಹಳ್ಳಿ: ಹೊಸ ವರ್ಷದ ಹಿನ್ನಲೆಯಲ್ಲಿ ಅಕ್ರಮ ಡ್ರಗ್ಸ್ ಮಾರಾಟ ತಡೆಯಲು ದೇವನಹಳ್ಳಿ ಪೊಲೀಸ್ ಠಾಣಾ ಸಿಬ್ಬಂದಿ ವಿಶೇಷ ಕಾರ್ಯಾಚರಣೆ ನಡೆಸಿ ನೈಜೀರಿಯಾ ಮೂಲದ ಡ್ರಗ್ಸ್ ಪೆಡ್ಲರ್‌ನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿ ವಿಮಾನ ನಿಲ್ದಾಣದ ಬ್ಯಾಕ್‌ಗೇಟ್ ಬಳಿ ಡ್ರಗ್ಸ್ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಪೊಲೀಸರ ದಾಳಿ ನಡೆಸಿದ ಕಾರ್ಯಾಚರಣೆಯಲ್ಲಿ 21 ಗ್ರಾಂ ಕೊಕೇನ್ ಮತ್ತು 30 ಗ್ರಾಂ ಎಂಡಿಎಂಎ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತನನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.