ADVERTISEMENT

ದೇವನಹಳ್ಳಿ| ಒಂಬತ್ತು ರೌಡಿ ಶೀಟರ್‌ ಗಡಿಪಾರು: ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2023, 4:51 IST
Last Updated 9 ಏಪ್ರಿಲ್ 2023, 4:51 IST
ಮಲ್ಲಿಕಾರ್ಜುನ ಬಾಲದಂಡಿ
ಮಲ್ಲಿಕಾರ್ಜುನ ಬಾಲದಂಡಿ   

ದೇವನಹಳ್ಳಿ: ಚುನಾವಣಾ ಅಕ್ರಮ ತಡೆ ಜತೆಗೆ ಶಾಂತಿಯುತ ಮತದಾನ ನಡೆಸುವ ಸಲುವಾಗಿ ಜಿಲ್ಲಾ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ಇದರ ಬೆನ್ನಲ್ಲೆ ಹೊಸಕೋಟೆಯ ಇಬ್ಬರು ಹಾಗೂ ನೆಲಮಂಗಲ ಒಬ್ಬ ರೌಡಿ ಶೀಟರ್‌ ಅನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ, ಕಾರಾಗೃಹಕ್ಕೆ ಕಳುಹಿಸಲಾಗಿದೆ.

9 ಮಂದಿಗೆ ಗಡಿಪಾರು: ಜಿಲ್ಲೆಯ ನಾಲ್ಕೂ ತಾಲೂಕಿನಿಂದ ಒಂಬತ್ತು ರೌಡಿಶೀಟರ್‌ಗಳನ್ನು ಚುನಾವಣೆ ಮುಗಿಯುವರೆಗೆ ಬೇರೆ ಜಿಲ್ಲೆಗೆ ಗಡಿಪಾರು ಮಾಡಲಾಗುತ್ತಿದೆ. ಗೂಂಡಾ ಪ್ರವೃತ್ತಿಯಲ್ಲಿ ತೊಡಗಿರುವ 1000 ಕ್ಕೂ ರೌಡಿಶೀಟರ್‌ಗಳನ್ನು ಗುರುತಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿದೆ.

ಜಿಲ್ಲೆಯಲ್ಲಿ ಪರವಾನಗಿ ಪಡೆದ 2000ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳಿವೆ. ಭಾಗಶಃ ಶಸ್ತ್ರಾಸ್ತ್ರಗಳನ್ನು ಈಗಾಗಲೇ ಠಾಣೆಗಳಲ್ಲಿ ಠೇವಣಿ ಇರಿಸಿಕೊಳ್ಳಲಾಗಿದೆ. 150 ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಬೇಕಿದ್ದು, ಮೂರು ದಿನಗಳ ಗಡುವು ನೀಡಲಾಗಿದೆ.

ADVERTISEMENT

ಜಿಲ್ಲೆಯಾದ್ಯಂತ ಸ್ಥಾಪಿಸಿರುವ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಚುರುಕುಗೊಳಿಸಲಾಗಿದೆ. ಕೆಲ ದಿನಗಳ ಹಿಂದಷ್ಟೆ ಅಕ್ರಮವಾಗಿ ಸಾಗಿಸುತ್ತಿದ್ದ 1.33 ಕೋಟಿ ಮೊತ್ತದ ಸಾಮಗ್ರಿಗಳನ್ನು ನಗದು ಜಪ್ತಿ ಮಾಡಲಾಗಿದೆ.

ಜಿಲ್ಲೆಯ ನಾಲ್ಕು ಕ್ಷೇತ್ರಗಳು ಸೂಕ್ಷ್ಮವಾಗಿವೆ. ಚುನಾವಣಾ ಭದ್ರತೆಗಾಗಿ ಮೂರು ಬಿಎಸ್‌ಎಫ್‌ ತುಕಡಿಗಳು ಬಂದಿಳಿದಿದ್ದು, ಎರಡನೇ ಹಂತದಲ್ಲಿ ಇನ್ನಷ್ಟು ಸಿಬ್ಬಂದಿ ನಿಯೋಜಿಸಲಾಗುತ್ತಿದೆ. ಕೇಂದ್ರಿಯ ಪಡೆಗಳು ಈಗಾಗಲೇ ಕ್ಷೇತ್ರಗಳಲ್ಲಿ ರೂಟ್‌ಮಾರ್ಚ್ ನಡೆಸಿವೆ.

‘ವಿಧಾನಸಭಾ ಚುನಾವಣೆ ಸಂಬಂಧ ಜಿಲ್ಲೆಯ ನಾಲ್ಕೂ ತಾಲ್ಲೂಕುಗಳಲ್ಲೂ ಚೆಕ್‌ಪೋಸ್ಟ್ ಕಾರ್ಯನಿರ್ವಹಿಸುತ್ತಿದ್ದು ಸಿಬ್ಬಂದಿ ಕಟ್ಟುನಿಟ್ಟಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚುನಾವಣೆ ವೇಳೆ ಅಶಾಂತಿ ಸೃಷ್ಟಿಸಬಹುದಾದ ಕೆಲವು ರೌಡಿಗಳನ್ನು ಕರೆಸಿ ಎಚ್ಚರಿಕೆ ನೀಡಿ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ. ಮೂವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ. ಒಂಬತ್ತು ಮಂದಿಯ ಗಡಿಪಾರಿಗೆ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ
ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.