ADVERTISEMENT

ರಸ್ತೆಗೆ ಇಳಿಯದ ಬಸ್‌

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2020, 7:21 IST
Last Updated 12 ಡಿಸೆಂಬರ್ 2020, 7:21 IST
ಆನೇಕಲ್‌ನಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟಿಸಿದ್ದರಿಂದ ಸಾರ್ವಜನಿಕರು ಪರದಾಡುವಂತಾಯಿತು
ಆನೇಕಲ್‌ನಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟಿಸಿದ್ದರಿಂದ ಸಾರ್ವಜನಿಕರು ಪರದಾಡುವಂತಾಯಿತು   

ಆನೇಕಲ್: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕೈಗೊಂಡಿದ್ದ ಬಸ್‌ ಬಂದ್‌ ಹಿನ್ನೆಲೆಯಲ್ಲಿ ಸಾರ್ವಜನಿಕರು ಆನೇಕಲ್‌ನಲ್ಲಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಬೆಳಿಗ್ಗೆ 7ರ ಸುಮಾರಿಗೆ ಕೆಲವು ಬಸ್‌ಗಳು ಡಿಪೊದಿಂದ ಬಸ್‌ನಿಲ್ದಾಣಕ್ಕೆ ಬಂದವು. ಆದರೆ, ಹಲವು ಮಂದಿ ಕಾರ್ಮಿಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬಸ್‌ಗಳು ಸಂಚರಿಸಲಿಲ್ಲ. ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾರ್ಮಿಕ ಮುಖಂಡರು ತಿಳಿಸಿದರು.

ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳು ರಸ್ತೆಗಿಳಿಯದ ಹಿನ್ನೆಲೆಯಲ್ಲಿ ಸಾರ್ವಜನಿಕರು ಪರದಾಡುವಂತಾಯಿತು. ಖಾಸಗಿ ಬಸ್‌ಗಳು ದರ ಏರಿಕೆ ಮಾಡಿದ್ದವು. ಆದರೂ, ಸಾರ್ವಜನಿಕರು ಖಾಸಗಿ ಬಸ್‌ಗಳನ್ನೇ ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.