ADVERTISEMENT

ಕೆಂಪೇಗೌಡ ಸ್ಮರಣೆ: ನೋಟ್‌ಬುಕ್‌ ವಿತರಣೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2025, 15:21 IST
Last Updated 26 ಜೂನ್ 2025, 15:21 IST
Venugopala K.
   Venugopala K.

ಪ್ರಜಾವಾಣಿ ವಾರ್ತೆ

ಆನೇಕಲ್: ತಾಲೂಕಿನ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಾರಗದ್ದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಾಡಪ್ರಭು ಕೆಂಪೇಗೌಡ ದಿನಾಚರಣೆ ಪ್ರಯುಕ್ತ  ಜಿ.ಪಂ ಮಾಜಿ ಸದಸ್ಯ ಪಿ.ಎಲ್.ಡಿ.ವೆಂಕಟೇಶ್ ಗೌಡ ಅವರು ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಮತ್ತು ಕಲಿಕಾ ಸಾಮಗ್ರಿ ವಿತರಿಸಿದರು.

ಗ್ರಾ.ಪಂ. ಸದಸ್ಯ ಭಾರತಿ ಮಾತನಾಡಿ, ಬೆಂಗಳೂರು ನಿರ್ಮಾತೃ ಕೆಂಪೇಗೌಡರನ್ನು ಸ್ಮರಿಸಬೇಕಾದದ್ದು ಎಲ್ಲರ ಜವಾಬ್ದಾರಿ. ಸಮ ಸಮಾಜದ ನಿರ್ಮಾಣಕ್ಕೆ ಅವರ  ಪ್ರಾಮುಖ್ಯತೆಯಾಗಿತು ಎಂದರು.

ADVERTISEMENT

ಜಿ.ಪಂ. ಮಾಜಿ ಸದಸ್ಯ ವೆಂಕಟೇಶ್ ಗೌಡ ಮಾತನಾಡಿದರು.

ಹಾರಗದ್ದೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮಾ ರಾಮಸ್ವಾಮಿ, ಉಪಾಧ್ಯಕ್ಷ ಇಂದ್ರ ಶಿವಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.