ADVERTISEMENT

ಯಶೋಧಮ್ಮ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ

ಯಲಿಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ೇಕಪಕ್ಷೀಯ ನಿರ್ಣಯದ ಆರೋಪ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2018, 13:57 IST
Last Updated 4 ಡಿಸೆಂಬರ್ 2018, 13:57 IST
ಯಲಿಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋಧಮ್ಮ ಅವರ ವಿರುದ್ಧ ಉಪವಿಭಾಗಾಧಿಕಾರಿ ಮಂಜುನಾಥ್ ಅವರಿಗೆ ಅವಿಶ್ವಾಸ ನಿರ್ಣಯ ಪತ್ರ ಸಲ್ಲಿಸಿದ ಪಂಚಾಯಿತಿ ಸದಸ್ಯರು
ಯಲಿಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋಧಮ್ಮ ಅವರ ವಿರುದ್ಧ ಉಪವಿಭಾಗಾಧಿಕಾರಿ ಮಂಜುನಾಥ್ ಅವರಿಗೆ ಅವಿಶ್ವಾಸ ನಿರ್ಣಯ ಪತ್ರ ಸಲ್ಲಿಸಿದ ಪಂಚಾಯಿತಿ ಸದಸ್ಯರು   

ವಿಜಯಪುರ : ಚನ್ನರಾಯಪಟ್ಟಣ ಹೋಬಳಿ ಯಲಿಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋಧಮ್ಮ ಅವರ ವಿರುದ್ಧ 10 ಮಂದಿ ಗ್ರಾಮ ಪಂಚಾಯಿತಿ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ.

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಮಂಜುನಾಥ್‌ ಅವರಿಗೆ ಅವಿಶ್ವಾಸ ಪತ್ರವನ್ನು ಸಲ್ಲಿಸಿದ್ದಾರೆ. ‘ಅಧ್ಯಕ್ಷೆ ಯಶೋಧಮ್ಮ ಅವರು, ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಹಾಗಾಗಿ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಯಶೋಧಮ್ಮ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ಬೇರೆಯವರನ್ನು ಅಧ್ಯಕ್ಷರನ್ನಾಗಿ ಮಾಡಬೇಕು’ ಎಂದು ಮನವಿ ಮಾಡಿದ್ದಾರೆ.

ಪಂಚಾಯಿತಿಯ ಉಪಾಧ್ಯಕ್ಷ ಶಿವಪ್ಪ, ಸದಸ್ಯರಾದ ರಾಮಾಂಜಿನೇಯ, ಎಂ.ಪ್ರಭಾಕರ್, ಶ್ವೇತಾಕಿಟ್ಟಿ, ಅಶ್ವಿನಿ, ನಾರಾಯಣಸ್ವಾಮಿ, ನೇತ್ರಮ್ಮ, ಮುನಿತಿಮ್ಮರಾಯಪ್ಪ, ಶೈಲಾ ರಮೇಶ್, ಶೋಭಾ ಅವಿಶ್ವಾಸದ ಪತ್ರ ಸಲ್ಲಿಸಿದ್ದಾರೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್ ಅವರು ಸದಸ್ಯರ ಸಹಿಗಳನ್ನು ದೃಢೀಕರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.