ADVERTISEMENT

ಭಾವೈಕ್ಯ ಶಿಬಿರ; ಸೂಲಿಬೆಲೆ ವಿದ್ಯಾರ್ಥಿಗಳು ಆಯ್ಕೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2019, 13:32 IST
Last Updated 9 ಸೆಪ್ಟೆಂಬರ್ 2019, 13:32 IST
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಲಿಬೆಲೆ, ದೇವನಹಳ್ಳಿ, ದೊಡ್ಡಬಳ್ಳಾಪುರ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ತೆರಳಿದರು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಲಿಬೆಲೆ, ದೇವನಹಳ್ಳಿ, ದೊಡ್ಡಬಳ್ಳಾಪುರ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ತೆರಳಿದರು   

ಸೂಲಿಬೆಲೆ: ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಸೇವ ಮನೋಭಾವ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ದಾರಿಯಾಗಲಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯಾಧಿಕಾರಿ ಡಾ.ಆದಿನಾರಾಯಣಪ್ಪ. ಎನ್.ಎ. ಹೇಳಿದರು.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಯುವ ಭಾವೈಕ್ಯ ಶಾಂತಿ ಶಿಬಿರಕ್ಕೆ ಆಯ್ಕೆಯಾಗಿರುವ ಬಗ್ಗೆ ಅವರು ಮಾತನಾಡಿದರು.

ರಾಷ್ಟ್ರೀಯ ಸೇವಾ ಶಿಬಿರದಲ್ಲಿ ದೇಶದ ಬೇರೆ ರಾಜ್ಯಗಳ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಪರಸ್ಪರ ಸಂಸ್ಕೃತಿಯ ಕೊಡುಕೊಳ್ಳುವಿಕೆ, ಜ್ಞಾನದ ಸಂಗಮವಾಗಲಿದೆ ಎಂದರು.

ADVERTISEMENT

ದೆಹಲಿಯಲ್ಲಿ ಇದೇ 21 ರವರೆಗೆ ಶಿಬಿರ ನಡೆಯಲಿದ್ದು, ಹಿರಿಯ ಗಾಂಧಿವಾದಿ ಡಾ.ಎಸ್.ಎನ್.ಸುಬ್ಬರಾವ್ ನಿರ್ದೇಶನದಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಲಿಬೆಲೆ, ದೇವನಹಳ್ಳಿ, ದೊಡ್ಡಬಳ್ಳಾಪುರ ಕಾಲೇಜಿನ ತಲಾ 10 ವಿದ್ಯಾರ್ಥಿಗಳು ಶಿಬಿರದ ಪ್ರಯೋಜನ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.