
ಹೊಸಕೋಟೆ: ಸಂಚಾರ ದಟ್ಟಣೆ ನಿಯಂತ್ರಿಸಲು ಸಂಚಾರ ಠಾಣೆ ಪೊಲೀಸರು ನಗರದ ಪ್ರಮುಖ ರಸ್ತೆಗಳಲ್ಲಿ ಸೋಮವಾರದಿಂದಲೇ ಪ್ರಾಯೋಗಿಕವಾಗಿ ಏಕಮುಖ ಸಂಚಾರ ಜಾರಿಗೊಳಿಸಲಾಗಿದೆ.
ಹೊಸಕೋಟೆ ನಗರದ ಕೆಇಬಿ ವೃತ್ತದಲ್ಲಿ ಏಕಮುಖ ಸಂಚಾರಕ್ಕೆ ಚಾಲನೆ ನೀಡಿದ ಡಿವೈಎಸ್‌ಪಿ ಮಲ್ಲೇಶ್, ವಾಹನ ದಟ್ಟಣೆ ನಿಯಂತ್ರಿಸಲು ಪ್ರಾಯೋಗಿಕವಾಗಿ ಏಕಮುಖ ಸಂಚಾರಕ್ಕೆ ಚಾಲನೆ ನೀಡಲಾಗಿದೆ. ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲಾಗುವುದು. ಸಾರ್ವಜನಿಕರು, ವಾಹನ ಸವಾರರು ಸಹಕಾರ ನೀಡುವಂತೆ ಮನವಿ ಮಾಡಿದರು.
ರಾಜಧಾನಿಗೆ ಹತ್ತಿರವಿರುವ ಕಾರಣ ಜನಸಂಖ್ಯೆ, ವಾಹನಗಳ ಸಂಚಾರ ಬಡಾವಣೆ, ಅಪಾರ್ಟ್‌ಮೆಂಟ್‌ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಸಂಚಾರ ದಟ್ಟನೆ ಹೆಚ್ಚಾಗಿದೆ. ಸುಗಮ ಸಂಚಾರ ವ್ಯವಸ್ಥೆಗೆ ಏಕಮುಖ ಸಂಚಾರ ಅನಿವಾರ್ಯವಾಗಿತ್ತು ಎಂದರು.
ಲೈಸನ್ಸ್ ರದ್ದು : ಪಾದಚಾರಿ ಮಾರ್ಗ ಅತಿಕ್ರಮಿಸುವ ಅಂಗಡಿ, ಮುಗ್ಗಟ್ಟುಗಳ ಮಾಲೀಕರ ವಿರುದ್ಧ ಕ್ರಮ ಜರುಗಿಸಿ ಅಂಗಡಿ ಪರವಾನಿಗೆ ರದ್ದು ಮಾಡಲು ನಗರಸಭೆಗೆ ಸೂಚನೆ ನೀಡಲಾಗುತ್ತದೆ ಎಂದರು.
ನಗರದಲ್ಲಿ ಇತ್ತೀಚೆಗೆ ಅಪ್ರಾಪ್ತರು ದ್ವಿಚಕ್ರವಾಹನ ಚಲಾಯಿಸುತ್ತಿರುವುದು, ತ್ರಿಬಲ್ ರೈಡಿಂಗ್ ಮತ್ತು ಚಾಲನೆ ವೇಳೆ ಮೊಬೈಲ್ ಬಳಕೆ ಕಂಡುಬರುತ್ತಿದೆ. ಇದರಿಂದ ಅಪಘಾತಗಳು ಸಂಖ್ಯೆ ಹೆಚ್ಚಾಗುತ್ತಿದವೆ. ಇದು ಹೀಗೆ ಮುಂದುವರೆದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಂಚಾರ ಠಾಣೆಯ ಸಿಪಿಐ ಶ್ರೀಕಂಠಯ್ಯ, ನಗರ ಠಾಣೆಯ ಸಿಪಿಐ ಗೋವಿಂದ್ ಹಾಗೂ ಸಿಬ್ಬಂದಿ ಇದ್ದರು.
ಎಲ್ಲೆಲ್ಲಿ ಏಕಮುಖ ಸಂಚಾರ?
* ಕೆಇಬಿ ವೃತ್ತದ ಎರಡು ಬದಿಯ ಸರ್ವೀಸ್ ರಸ್ತೆ
* ಟಿಜಿ ಬಡಾವಣೆಯ ಚಿಕ್ಕೇಗೌಡ ಕಲ್ಯಾಣ ಮಂಟಪದ ರಸ್ತೆ
* ಗಂಗಮ್ಮ ಗುಡಿ ರಸ್ತೆ
* ಚಿಂತಾಮಣಿ ಮತ್ತು ಮಾಲೂರು ರಸ್ತೆಯ ಸರ್ಕಾರಿ ಆಸ್ಪತ್ರೆ ಸರ್ವಿಸ್ ರಸ್ತೆ
* ಸಾಧನ ಥಿಯೇಟರ್ ರಸ್ತೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.