ADVERTISEMENT

‘ಶಿಕ್ಷಣದಿಂದ ಮಾತ್ರ ಪ್ರಗತಿ ಸಾಧ್ಯ’

​ಪ್ರಜಾವಾಣಿ ವಾರ್ತೆ
Published 16 ಜುಲೈ 2019, 12:33 IST
Last Updated 16 ಜುಲೈ 2019, 12:33 IST
ವಿಜಯಪುರದ ಗಾಂಧಿ ಚೌಕದಲ್ಲಿರುವ ನಗರೇಶ್ವರಸ್ವಾಮಿ ಪ್ರಾರ್ಥನಾ ಮಂದಿರದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿವೇತನ ವಿತರಣಾ ಸಮಾರಂಭ, ಪ್ರತಿಭಾ ಪುರಸ್ಕಾರ ವಿತರಣೆ ಕಾರ್ಯಕ್ರಮದಲ್ಲಿ ಪಿಎಚ್‌ಡಿ ಪದವೀಧರೆ ರೇಖಾ ಶಿವಪ್ರಸಾದ್ ಅವರನ್ನು ಅಭಿನಂದಿಸಲಾಯಿತು
ವಿಜಯಪುರದ ಗಾಂಧಿ ಚೌಕದಲ್ಲಿರುವ ನಗರೇಶ್ವರಸ್ವಾಮಿ ಪ್ರಾರ್ಥನಾ ಮಂದಿರದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿವೇತನ ವಿತರಣಾ ಸಮಾರಂಭ, ಪ್ರತಿಭಾ ಪುರಸ್ಕಾರ ವಿತರಣೆ ಕಾರ್ಯಕ್ರಮದಲ್ಲಿ ಪಿಎಚ್‌ಡಿ ಪದವೀಧರೆ ರೇಖಾ ಶಿವಪ್ರಸಾದ್ ಅವರನ್ನು ಅಭಿನಂದಿಸಲಾಯಿತು   

ವಿಜಯಪುರ: ಶೈಕ್ಷಣಿಕ ಪ್ರಗತಿಯಾದರೆ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಅಯೋಧ್ಯಾ ಶಿವಾಚಾರ್ಯ ವೈಶ್ಯ ನಗರ್ತ ಯುವಕ ಸಂಘದ ಅಧ್ಯಕ್ಷ ಎನ್. ವಿಶ್ವನಾಥ್ ಹೇಳಿದರು.

ಇಲ್ಲಿನ ಗಾಂಧಿ ಚೌಕದಲ್ಲಿರುವ ನಗರೇಶ್ವರಸ್ವಾಮಿ ಪ್ರಾರ್ಥನಾ ಮಂದಿರದಲ್ಲಿ ಅಯೋಧ್ಯಾ ಶಿವಾಚಾರ್ಯ ವೈಶ್ಯ ನಗರ್ತ ಯುವಕ ಸಂಘದಿಂದ ಆಯೋಜಿಸಿದ್ದ ವಿದ್ಯಾರ್ಥಿ ವೇತನ ವಿತರಣೆ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಯಾವ ದೇಶ ಶಿಕ್ಷಣದಿಂದ ವಂಚಿತವಾಗಿದೆಯೋ ಅಂತಹ ದೇಶ ಅಭಿವೃದ್ಧಿ ಹೊಂದಲಿಕ್ಕೆ ಸಾಧ್ಯವಾಗುವುದಿಲ್ಲ. ಆದ್ದರಿಂದ ನಗರ್ತ ಸಮುದಾಯದಲ್ಲಿ ಎಷ್ಟು ಮಕ್ಕಳು ಉತ್ತಮ ಅಂಕಗಳನ್ನು ಪಡೆದುಕೊಂಡು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿದ್ದಾರೋ ಅಂತಹ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಪ್ರೋತ್ಸಾಹಧನ ವಿತರಣೆ ಮಾಡುವ ಮೂಲಕ ಶಿಕ್ಷಣಕ್ಕೆ ಆಧ್ಯತೆ ನೀಡಲಾಗುತ್ತಿದೆ. ಸಮುದಾಯದ ಸಹಕಾರ ಅಗತ್ಯವಾಗಿ ಬೇಕಾಗಿದೆ ಎಂದರು.

ADVERTISEMENT

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ಶಿಕ್ಷಕ ಪಿ.ಎಂ. ಕೊಟ್ರೇಶ್ ಮಾತನಾಡಿ, ಸಂಘ ಸಂಸ್ಥೆಗಳು, ಸರ್ಕಾರ ಸೇರಿದಂತೆ ಎಲ್ಲಾ ಮೂಲಗಳಿಂದ ಶೈಕ್ಷಣಿಕ ಬೆಳವಣಿಗೆಗಾಗಿ ಸಿಗುವಂತಹ ಎಲ್ಲಾ ಅವಕಾಶಗಳನ್ನು ಮಕ್ಕಳು ಸದುಪಯೋಗ ಮಾಡಿಕೊಳ್ಳಬೇಕು ಎಂದರು.

ಶಿಕ್ಷಣ ಪಡೆಯುವುದೆಂದರೆ ಅದೊಂದು ತಪಸ್ಸು, ಏಕಾಗ್ರತೆ, ಸೃಜನಶೀಲತೆಯನ್ನು ಮೈಗೂಡಿಸಿಕೊಂಡರೆ ವಿದ್ಯೆ ತಾನಾಗಿಯೇ ಒಲಿಯುತ್ತದೆ. ವಿದ್ಯಾರ್ಥಿಯ ಜೀವನದಲ್ಲಿ ಸಾಧಿಸಬೇಕು ಎನ್ನುವ ಛಲವಿರಬೇಕು. ಪೋಷಕರು ಇದಕ್ಕೆ ಬೆಂಬಲವಾಗಿ ನಿಲ್ಲಬೇಕು. ಯುವಕ ಸಂಘಗಳು ಶಿಕ್ಷಣಕ್ಕೆ ಆದ್ಯತೆ ನೀಡುತ್ತಿರುವುದು ಶ್ಲಾಘನೀಯ ಎಂದರು.

ಯುವಕ ಸಂಘದಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನದ ರೂಪದಲ್ಲಿ ಪ್ರೋತ್ಸಾಹಧನ ವಿತರಣೆ ಮಾಡಲಾಯಿತು.

ಹೆಮ್ಮೆಯ ಕನ್ನಡಿಗ ಪ್ರಶಸ್ತಿ ವಿಜೇತ ರುತ್ವಿಕ್ ರುಜುಲ್, ಪಿಎಚ್‌ಡಿ ಪದವೀಧರೆ ರೇಖಾ ಶಿವಪ್ರಸಾದ್, ಕೆ.ಉದಯ್‌ಕುಮಾರ್, ವಿ.ಸುಮನ್, ಎಂ.ಆರ್. ಸುರೇಶ್, ಎ.ಮಧು, ಬೇಕರಿ ಆನಂದಪ್ಪ, ಪ್ರಭುದೇವ್, ವಿಶ್ವನಾಥ್‌ ಮಾಮ, ಸುರೇಶ್‌ ಬಾಬು, ಬಸವರಾಜು, ಸಿ.ಭಾಸ್ಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.