ADVERTISEMENT

‘ಸಂಘಟನೆ ದುರ್ಬಳಕೆ ಸಲ್ಲ’

vijayapura

​ಪ್ರಜಾವಾಣಿ ವಾರ್ತೆ
Published 18 ಜನವರಿ 2019, 13:20 IST
Last Updated 18 ಜನವರಿ 2019, 13:20 IST
ತೆನೆಯೂರು ಗ್ರಾಮದಲ್ಲಿ ಕರ್ನಾಟಕ ದಲಿತ ಸ್ವಾಭಿಮಾನಿ ಸಮಿತಿ ಗ್ರಾಮ ಶಾಖೆಯನ್ನು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಮುನಿಶಾಮಣ್ಣ ಉದ್ಘಾಟಿಸಿದರು
ತೆನೆಯೂರು ಗ್ರಾಮದಲ್ಲಿ ಕರ್ನಾಟಕ ದಲಿತ ಸ್ವಾಭಿಮಾನಿ ಸಮಿತಿ ಗ್ರಾಮ ಶಾಖೆಯನ್ನು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಮುನಿಶಾಮಣ್ಣ ಉದ್ಘಾಟಿಸಿದರು   

ವಿಜಯಪುರ: ‘ಸಂಘಟನೆಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಾಜದಲ್ಲಿ ಅಸ್ಪೃಶ್ಯತೆ, ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಸಾಧ್ಯ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಮುನಿಶಾಮಣ್ಣ ಹೇಳಿದರು.

ತೆನೆಯೂರು ಗ್ರಾಮದಲ್ಲಿ ಕರ್ನಾಟಕ ದಲಿತ ಸ್ವಾಭಿಮಾನಿ ಸಮಿತಿ ಗ್ರಾಮ ಶಾಖೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ನಡೆಯುವ ವಿದ್ಯಮಾನ ಕುರಿತು ಜನರಿಗೆ ತಿಳಿವಳಿಕೆ ಮೂಡಿಸುವುದು, ಹೋರಾಟ ಮಾಡುವುದು ಅಷ್ಟೇ ಅಲ್ಲದೆ ದಲಿತ ವಿರೋಧಿ ನೀತಿ ತರುವ ಸರ್ಕಾರವನ್ನು ಪ್ರಶ್ನಿಸುವಂತಹ ಹಕ್ಕು ಸಂಘಟನೆಗಳಿಗೆ ಇದೆ. ಹೋರಾಟ ಯಶಸ್ವಿಯಾಗಬೇಕಾದರೆ ದಲಿತ ಸಂಘಟನೆಗಳು ಒಗ್ಗೂಡಬೇಕು. ಕಾನೂನಿನ ಚೌಕಟ್ಟಿನಲ್ಲಿ ಹೋರಾಟ ನಡೆಸಬೇಕೆಂದು ಸಲಹೆ ನೀಡಿದರು.

ಸಂಘಟನೆ ರಾಜ್ಯ ಘಟಕದ ಉಪಾಧ್ಯಕ್ಷ ಎಚ್.ನಾರಾಯಣಸ್ವಾಮಿ ಮಾತನಾಡಿ, ಸಮಾಜದಲ್ಲಿ ಆರ್ಥಿಕವಾಗಿ ದುರ್ಬಲರಾಗಿರುವ ಜನರನ್ನು ಸಬಲರನ್ನಾಗಿ ಮಾಡಲು ಉದ್ಯೋಗಾವಕಾಶ ಕಲ್ಪಿಸಬೇಕು. ಅನ್ಯಾಯಕ್ಕೆ ಒಳಗಾಗಿರುವ ಜನರಿಗೆ ನ್ಯಾಯ ನೀಡುವ ಕೆಲಸವನ್ನು ಸಂಘಟನೆ ಮಾಡಬೇಕು. ಯಾವುದೇ ಸಮುದಾಯ ಅಥವಾ ವ್ಯಕ್ತಿಗಳ ವಿರುದ್ಧ ವೈಯಕ್ತಿಕ ದ್ವೇಷ ಸಾಧನೆಗಾಗಿ ಸಂಘಟನೆಯನ್ನು ದುರ್ಬಳಕೆ ಮಾಡಿಕೊಳ್ಳಬಾರದು. ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವ ಮೂಲಕ ಉತ್ತಮವಾಗಿ ಸಂಘಟಿತರಾಗಬೇಕು ಎಂದರು.

ಸಂಘಟನೆ ಪದಾಧಿಕಾರಿಗಳು, ತೆನೆಯೂರು ಗ್ರಾಮದ ದಲಿತ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT