ADVERTISEMENT

ಕೃಷಿ ಕಾಯ್ದೆ ವಿರುದ್ಧ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2020, 5:58 IST
Last Updated 10 ಡಿಸೆಂಬರ್ 2020, 5:58 IST
ಆನೇಕಲ್ ತಾಲ್ಲೂಕಿನ ಮಾಸ್ತೇನಹಳ್ಳಿ ವೀರಭದ್ರಸ್ವಾಮಿ ದೇವಾಲಯದಲ್ಲಿ ದ್ವಾದಶ ಲಿಂಗಗಳ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ರಾಜಾಪುರ ಸ್ವಾಮೀಜಿ ಮಾತನಾಡಿದರು 
ಆನೇಕಲ್ ತಾಲ್ಲೂಕಿನ ಮಾಸ್ತೇನಹಳ್ಳಿ ವೀರಭದ್ರಸ್ವಾಮಿ ದೇವಾಲಯದಲ್ಲಿ ದ್ವಾದಶ ಲಿಂಗಗಳ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ರಾಜಾಪುರ ಸ್ವಾಮೀಜಿ ಮಾತನಾಡಿದರು    

ವಿಜಯಪುರ: ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬಾರುಕೋಲು ಚಳವಳಿ ಮತ್ತು ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಪ್ರತಿಭಟನೆಗೆ ಹೋಬಳಿಯ ರೈತರು ಬಾರುಕೋಲುಗಳನ್ನು ಹಿಡಿದು ತೆರಳಿದರು.

ರೈತ ಸಂಘದ ಹೋಬಳಿ ಘಟಕದ ಅಧ್ಯಕ್ಷ ಮಂಡಿಬೆಲೆ ನಾರಾಯಣಸ್ವಾಮಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ದೂರಿದರು.

ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಶೇಕಡ 26ರಷ್ಟು ಹೆಚ್ಚಳವಾಗಿದೆ. ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಕೃಷಿ ಬಗ್ಗೆ ಗೊತ್ತಿಲ್ಲ. ದೇಶದ ದೊಡ್ಡ ಸಂಖ್ಯೆಯಲ್ಲಿರುವ ರೈತರನ್ನು ಕಡೆಗಣಿಸಿದೆ. ಸರ್ಕಾರದ ತಪ್ಪು ನೀತಿಗಳು ಹಾಗೂ ಯೋಜನೆಗಳ ಅನುಷ್ಠಾನದಲ್ಲಿನ ವೈಫಲ್ಯಗಳಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ ಎಂದರು.

ADVERTISEMENT

ರೈತ ಮುಖಂಡ ಆಂಜಿನಪ್ಪ ಮಾತನಾಡಿ, ಸೂಟುಬೂಟಿನ ಕೇಂದ್ರ ಸರ್ಕಾರ ರೈತರಿಗೆ ಮಾನ್ಯತೆ ನೀಡುತ್ತಿಲ್ಲ. ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ಭೂ ಸ್ವಾಧೀನ ಕಾಯ್ದೆಯು ರೈತರಿಗೆ ಮಾರಕವಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.