ADVERTISEMENT

ದೊಡ್ಡಬಳ್ಳಾಪುರ | ನವಿಲು ಬೇಟೆ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2023, 14:15 IST
Last Updated 20 ಸೆಪ್ಟೆಂಬರ್ 2023, 14:15 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ದೊಡ್ಡಬಳ್ಳಾಪುರ: ತಾಲ್ಲೂಕಿನ ಅರಳುಮಲ್ಲಿಗೆ ಕೆರೆ ಅಂಗಳದಲ್ಲಿ ನವಿಲು ಬೇಟೆಯಾಡಿದ್ದ ಇಬ್ಬರು ಬೇಟೆಗಾರನನ್ನು ಬಂಧಿಸಿ, ಒಂದು ನಾಡ ಬಂದೂಕು ಹಾಗೂ ಒಂದು ದ್ವಿಚಕ್ರ ವಾಹನವನ್ನು ಗ್ರಾಮಾಂತರ ಠಾಣೆ ಪೊಲೀಸರು ಮಂಗಳವಾರ ರಾತ್ರಿ ವಶ ಪಡಿಸಿಕೊಂಡಿದ್ದಾರೆ.

ಆಂಧ್ರಪ್ರದೇಶ ಮೂಲದ ಪುಟ್ಟಪರ್ತಿಯ ಶ್ರೀನಿವಾಸ್(42), ಬಾಲಾಜಿ (48) ಬಂಧಿತ ಆರೋಪಿಗಳು. ತೋಟವೊಂದಲ್ಲಿ ಕೆಲಸ ಮಾಡುತ್ತಿದ್ದ ಇವರು ಮಂಗಳವಾರ ರಾತ್ರಿ ಅರಳುಮಲ್ಲಿಗೆ ಕೆರೆ ಸಮೀಪ ನಾಡ ಬಂದೂಕು ಬಳಸಿ ಮೂರು ನವಿಲುಗಳನ್ನು ಬೇಟೆಯಾಡಿ ಕೊಂಡೊಯ್ಯುತ್ತಿದ್ದ ವೇಳೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

ADVERTISEMENT

ರಾತ್ರಿ ಗಸ್ತಿನಲ್ಲಿದ್ದ ಗ್ರಾಮಾಂತರ ಪೊಲೀಸ್‌ ಠಾಣೆ ಇನ್‌ಸ್ಪೆಕ್ಟರ್‌ ಮುನಿಕೃಷ್ಣ, ಎಎಸ್‌ಐ ಶಿವರಾಜ್ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ವಶಕ್ಕೆ ಪಡೆದಿರುವ ವಲಯ ಅರಣ್ಯಾಧಿಕಾರಿ ಕೃಷ್ಣೇಗೌಡ ಅವರು ನವಿಲುಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.