ADVERTISEMENT

ಸಹಕಾರ ಬ್ಯಾಂಕ್‌ಗೆ ಉತ್ತುಂಗದಲ್ಲಿ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2019, 12:46 IST
Last Updated 10 ಅಕ್ಟೋಬರ್ 2019, 12:46 IST
ಸೂಲಿಬೆಲೆ ಸಹಕಾರ ಬ್ಯಾಂಕಿಗೆ ಭೇಟಿ ನೀಡಿದ ಸಂಸದ ಬಿ.ಎನ್. ಬಚ್ಚೇಗೌಡ ಅವರನ್ನು ಬ್ಯಾಂಕಿನ ಅಧ್ಯಕ್ಷ ಬಿ.ವಿ. ಸತೀಶ್ ಗೌಡ ಹಾಗು ಸಿಬ್ಬಂದಿ ಅಭಿನಂದಿಸಿದರು
ಸೂಲಿಬೆಲೆ ಸಹಕಾರ ಬ್ಯಾಂಕಿಗೆ ಭೇಟಿ ನೀಡಿದ ಸಂಸದ ಬಿ.ಎನ್. ಬಚ್ಚೇಗೌಡ ಅವರನ್ನು ಬ್ಯಾಂಕಿನ ಅಧ್ಯಕ್ಷ ಬಿ.ವಿ. ಸತೀಶ್ ಗೌಡ ಹಾಗು ಸಿಬ್ಬಂದಿ ಅಭಿನಂದಿಸಿದರು   

ಸೂಲಿಬೆಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿಯೇ ಸೂಲಿಬೆಲೆ ರೇಷ್ಮೆ ಬೆಳೆಗಾರರ ಹಾಗು ರೈತರ ಸೇವಾ ಸಹಕಾರ ಬ್ಯಾಂಕ್ ಉತ್ತುಂಗದಲ್ಲಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯ ಬಿ.ಎನ್. ಬಚ್ಚೇಗೌಡ ಹೇಳಿದರು.

ಸೂಲಿಬೆಲೆ ಸಹಕಾರ ಬ್ಯಾಂಕಿನ ಆಯುಧ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಗ್ರಾಮೀಣ ಭಾಗದಲ್ಲಿ ರೈತ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಅವರ ಏಳಿಗೆಗೆ ಶ್ರಮಿಸುವ ಕೆಲಸವಾಗಬೇಕು ಎಂದರು.

ಬ್ಯಾಂಕಿನ ಅಧ್ಯಕ್ಷ ಬಿ.ವಿ. ಸತೀಶ್ ಗೌಡ ಮಾತನಾಡಿ, ಬ್ಯಾಂಕ್ ವ್ಯಾಪ್ತಿಯಲ್ಲಿ 7 ಆಹಾರ, 2 ಗೊಬ್ಬರ ಶಾಖೆಗಳು ಕಾರ್ಯನಿರ್ವಹಿಸುತ್ತಿದ್ದು ಪ್ರಸ್ತುತ ₹ 45 ಲಕ್ಷ ಲಾಭದಲ್ಲಿದೆ ಎಂದರು.

ADVERTISEMENT

ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ. ತಮ್ಮೇಗೌಡ ಮಾತನಾಡಿದರು. ಟಿಎಪಿಸಿಎಂಎಸ್ ಉಪಾಧ್ಯಕ್ಷ ಬಿ.ಎನ್. ಗೋಪಾಲ ಗೌಡ, ಬಿಜೆಪಿ ಯುವ ಮೊರ್ಚಾ ರಾಜ್ಯ ಕಾರ್ಯದರ್ಶಿ ಶರತ್ ಬಚ್ಚೇಗೌಡ, ಹೊಸಕೋಟೆ ಟೌನ್ ಸಹಕಾರ ಬ್ಯಾಂಕ್ ಅಧ್ಯಕ್ಷ ಕೃಷ್ಣಮೂರ್ತಿ, ಸಹಕಾರ ಬ್ಯಾಂಕ್ ಉಪಾಧ್ಯಕ್ಷ ಅಬ್ದುಲ್ ವಾಜಿದ್, ಬ್ಯಾಂಕಿನ ಸಿಇಒ ಶ್ರೀನಿವಾಸಮೂರ್ತಿ, ಸಿಬ್ಬಂದಿ ಹಾಗೂ ಇನ್ನಿತರ ಮುಖಂಡರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.