ADVERTISEMENT

ದ್ವಿಚಕ್ರವಾಹನ ಚಾಲನೆ ವಿದ್ಯಾರ್ಥಿಗಳಿಗೆ ದಂಡ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2022, 6:05 IST
Last Updated 21 ಅಕ್ಟೋಬರ್ 2022, 6:05 IST
ಹೊಸಕೋಟೆಯ ಕೆಇಬಿ ವೃತ್ತದಲ್ಲಿ ಪೊಲೀಸರು ದ್ವಿಚಕ್ರವಾಹನ ಚಾಲನೆ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಿದರು
ಹೊಸಕೋಟೆಯ ಕೆಇಬಿ ವೃತ್ತದಲ್ಲಿ ಪೊಲೀಸರು ದ್ವಿಚಕ್ರವಾಹನ ಚಾಲನೆ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಿದರು   

ಹೊಸಕೋಟೆ: ನಗರದಲ್ಲಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ದ್ವಿಚಕ್ರವಾಹನ ಓಡಿಸುವುದು ಮತ್ತು ಬೈಕ್‌ನಲ್ಲಿ ಮೂವರು ಸವಾರರು ಸಂಚರಿಸುತ್ತಿರುವ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್‌ ಮಂಜುನಾಥ್ ನೇತೃತ್ವದಲ್ಲಿ ಬುಧವಾರ ತಪಾಸಣೆ ನಡೆಯಿತು.

ಕಾಲೇಜು ಮುಗಿಸಿಕೊಂಡು ವಿದ್ಯಾರ್ಥಿಗಳು ಓಡಿಸುತ್ತಿದ್ದ 10ಕ್ಕೂ ಹೆಚ್ಚು ದ್ವಿಚಕ್ರವಾಹನಗಳನ್ನು ತಡೆದ ಪೊಲೀಸರು, ಪೋಷಕರನ್ನು ಸ್ಥಳಕ್ಕೆ ಕರೆಯಿಸಿ ಎಲ್ಲರಿಗೂ ಎಚ್ಚರಿಕೆ ನೀಡಿದರು.

ಈ ಬಾರಿ ಕೇವಲ ದಂಡ ಹಾಕಲಾಗುತ್ತದೆ. ಮತ್ತೆ ಮಕ್ಕಳು ಇದನ್ನೇ ಮುಂದುವರಿಸಿದರೆ ವಾಹನಗಳನ್ನು ಜಪ್ತಿ ಮಾಡಿ ಪೋಷಕರನ್ನು ನ್ಯಾಯಾಲಯದ ಕಟಕಟೆಯಲ್ಲಿ ನಿಲ್ಲಿಸಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ತಿಳಿಸಿದರು.

ADVERTISEMENT

ಪೊಲೀಸರು ನಿರಂತರವಾಗಿ ತಪಾಸಣಾ ಕಾರ್ಯ ನಡೆಸಿದರೆ ಅಪಘಾತಗಳು ಕಡಿಮೆಯಾಗುತ್ತವೆ. ಸಾರ್ವಜನಿಕರು ರಸ್ತೆಗಳಲ್ಲಿ ನಿರಾತಂಕವಾಗಿ ಓಡಾಡಬಹುದು. ಸಂಚಾರ ದಟ್ಟಣೆ ಕಿರಿಕಿರಿಯೂ ತಪ್ಪುತ್ತದೆ ಎಂದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.