ADVERTISEMENT

ಗ್ಯಾರಂಟಿ ಯೋಜನೆಗಳಿಂದ ಜನರು ನಿರಾಳ: ಶಾಸಕ ಶರತ್ ಬಚ್ಚೇಗೌಡ

​ಪ್ರಜಾವಾಣಿ ವಾರ್ತೆ
Published 3 ಜೂನ್ 2025, 16:14 IST
Last Updated 3 ಜೂನ್ 2025, 16:14 IST
ಹೊಸಕೋಟೆಯ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಶರತ್ ಬಚ್ಚೇಗೌಡ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು 
ಹೊಸಕೋಟೆಯ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಶರತ್ ಬಚ್ಚೇಗೌಡ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು    

ಹೊಸಕೋಟೆ: ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳಿಂದ ತಾಲ್ಲೂಕಿನ ಜನರಿಗೆ ₹400 ರಿಂದ ₹500 ಕೋಟಿಯಷ್ಟು ಅನುದಾನ ತಾಲ್ಲೂಕಿಗೆ ಬಂದಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಅವರು ಮಂಗಳವಾರ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಜನರಿಗೆ ಘೋಷಣೆ ಮಾಡಲಾದ ಪಂಚ ಗ್ಯಾರಂಟಿ ಯೋಜನೆಯಡಿ ತಾಲ್ಲೂಕಿಗೆ ದೊಡ್ಡ ಮೊತ್ತ ಹರಿದು ಬಂದಿದೆ. ಬಡವರು ಪ್ರತಿ ತಿಂಗಳು ಸಿಗುವ ಯೋಜನೆ ಫಲದಿಂದ ನಿರಾಳರಾಗಿದ್ದಾರೆ ಎಂದು ತಿಳಿಸಿದರು.

ADVERTISEMENT

ಈ ಸಭೆಯಲಿ ತಾಲ್ಲೂಕು ಪಂಚಾಯಿತಿ ಇಒ ಡಾ.ಸಿ.ಎನ್.ನಾರಾಯಣಸ್ವಾಮಿ, ಗ್ಯಾರಂಟಿ ಯೋಜನೆ ಅನುಷ್ಠಾನದ ತಾಲ್ಲೂಕು ಸಮಿತಿ ಪದಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.