ADVERTISEMENT

ಲ್ಯಾಬ್‌ ಟೆಕ್ನಿಷಿಯನ್ ನೇಮಿಸಿ: ಎಂ.ಎನ್. ನಾಗರಾಜ್‍

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2020, 2:01 IST
Last Updated 5 ನವೆಂಬರ್ 2020, 2:01 IST
ಆನೇಕಲ್ ತಾಲ್ಲೂಕಿನ ಚಂದಾಪುರ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಕೃಷ್ಣಾರೆಡ್ಡಿ ಮತ್ತು ಶ್ರೀನಿವಾಸ್ ಅವರನ್ನು ಮುಖಂಡರು ಅಭಿನಂದಿಸಿದರು
ಆನೇಕಲ್ ತಾಲ್ಲೂಕಿನ ಚಂದಾಪುರ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಕೃಷ್ಣಾರೆಡ್ಡಿ ಮತ್ತು ಶ್ರೀನಿವಾಸ್ ಅವರನ್ನು ಮುಖಂಡರು ಅಭಿನಂದಿಸಿದರು   

ದೇವನಹಳ್ಳಿ: ತಾಲ್ಲೂಕಿನ ಕುಂದಾಣ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಲ್ಯಾಬ್ ಟೆಕ್ನಿಷಿಯನ್‌ ನೇಮಿಸಲು ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಎನ್. ನಾಗರಾಜ್‍ ಅವರಿಗೆ ಪ್ರಗತಿಪರ ಸಂಘಟನೆಗಳ ಮುಖಂಡರು ಮನವಿ ಸಲ್ಲಿಸಿದರು.

ಕರ್ನಾಟಕ ಬಹುಜನ ಹಿತರಕ್ಷಣೆ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಎಂ. ನರಸಿಂಹ ಮಾತನಾಡಿ, ಹೋಬಳಿ ಕೇಂದ್ರವಾಗಿರುವ ಕುಂದಾಣ ಗ್ರಾಮದ ವ್ಯಾಪ್ತಿ 25ಕ್ಕೂ ಹೆಚ್ಚು ಗ್ರಾಮಗಳಿವೆ. ವಿವಿಧ ರೋಗಗಳಿಂದ ಬಳಲುವ ನೂರಾರು ರೋಗಿಗಳು ದೂರದ ದೇವನಹಳ್ಳಿ ಮತ್ತು ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಗಳಿಗೆ ತೆರಳಿ ರೋಗದ ತಪಾಸಣೆ ಮತ್ತು ಪರೀಕ್ಷೆ ಮಾಡಿಸುತ್ತಾರೆ. ಕೋವಿಡ್‌ ಸಂಕಷ್ಟದಲ್ಲಿ ರೋಗಿಗಳಿಗೆತೊಂದರೆಯಾಗುತ್ತಿದೆ’ ಎಂದರು.

ಈ ಹಿಂದೆ ಲ್ಯಾಬ್ ಟೆಕ್ನಿಷಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಂಗಾಧರ್ ಎಂಬುವವರನ್ನು ದೇವನಹಳ್ಳಿ ಸಮುದಾಯದ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಸ್ಥಳೀಯ ರೋಗಿಗಳಿಗೆ ಕಷ್ಟವಾಗುತ್ತಿದೆ ಎಂದರು.

ADVERTISEMENT

ಚಲವಾದಿ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ವಿ. ಸ್ವಾಮಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.