ದೊಡ್ಡಬಳ್ಳಾಪುರ: ಕೋವಿಡ್-19ನಂಥ ಸಂಕಷ್ಟದ ಸಮಯದಲ್ಲಿಯೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಸುವ ಮೂಲಕ ಕೇಂದ್ರ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಎಸ್‍ಪಿ ವತಿಯಿಂದ ತಾಲ್ಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿಎಸ್‍ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್,ಲಾಕ್‍ಡೌನ್‍ನಿಂದಾಗಿ ದೇಶದ ಬಡ ಹಾಗೂ ಮಧ್ಯಮ ವರ್ಗದ ಜನ ಬಳಲುತ್ತಿದ್ದಾರೆ. ಈ ನಡುವೆ ಕೇಂದ್ರ ಸರ್ಕಾರ ₹20 ಲಕ್ಷ ಕೋಟಿ ಪ್ಯಾಕೇಜ್ ನೀಡಿದ್ದು, ಬಂಡವಾಳಶಾಹಿಗಳ ಪರವಾಗಿ ₹17 ಲಕ್ಷ ಕೋಟಿ ನೀಡಿದೆ. ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ದಿನೇ ದಿನೇ ಏರಿಸುತ್ತಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಆದ್ದರಿಂದ ಪೆಟ್ರೋಲ್, ಡೀಸೆಲ್ ಬೆಲೆ ಕಡಿತಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅವರುಸರ್ಕಾರವನ್ನು ಒತ್ತಾಯಿಸಿದರು.
ಬಿಎಸ್‍ಪಿ ತಾಲ್ಲೂಕು ಉಸ್ತುವಾರಿ ಕೆ.ವಿ.ಮುನಿಯಪ್ಪ, ಮುಖಂಡರಾದ ಅಂಜಿನಪ್ಪ, ನರೇಂದ್ರಮೂರ್ತಿ, ಎನ್.ಎಂ. ದಾಳಪ್ಪ, ಬಾಬಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.