ಮುಳಬಾಗಿಲು: ತಾಲ್ಲೂಕಿನ ಕಸಬಾ ಹೋಬಳಿಯ ಕಪ್ಪಲಮೊಡಗು ಗ್ರಾಮದಲ್ಲಿ ಅ. 23ರಂದು ಏರ್ಪಡಿ ಸಲಾಗಿದ್ದ ಕಂದಾಯ ಮತ್ತು ಪಿಂಚಣಿ ಅದಾಲತ್ ಅನ್ನು ಮುಂದೂಡಲಾಗಿದೆ ಎಂದು ತಹಶೀಲ್ದಾರ್ ಕೆ.ಎನ್. ರಾಜಶೇಖರ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸ ಬೇಕಾಗಿದೆ. ಆದರೆ, ವಿಧಾನ ಪರಿಷತ್ ಚುನಾವಣೆ ಸಂಬಂಧ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಸೂಚನೆ ಮೇರೆಗೆ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.