ADVERTISEMENT

ಕೃಷಿ ವಿಜ್ಞಾನ ಕೇಂದ್ರದಲ್ಲಿ ವೃಕ್ಷಾರೋಹಣ ಅಭಿಯಾನ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2019, 5:22 IST
Last Updated 20 ಸೆಪ್ಟೆಂಬರ್ 2019, 5:22 IST
ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ  ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಅಂಗವಾಗಿ ವೃಕ್ಷಾರೋಹಣ ಅಭಿಯಾನ ಹಮ್ಮಿಕೊಳ್ಳಲಾಗಿತ್ತು
ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ  ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಅಂಗವಾಗಿ ವೃಕ್ಷಾರೋಹಣ ಅಭಿಯಾನ ಹಮ್ಮಿಕೊಳ್ಳಲಾಗಿತ್ತು   

ದೊಡ್ಡಬಳ್ಳಾಪುರ: ಇಲ್ಲಿನ ಹಾಡೋನಹಳ್ಳಿ ಕೃಷಿವಿಜ್ಞಾನ ಕೇಂದ್ರದ ಆವರಣದಲ್ಲಿ ಭಾರತೀಯ ಕೃಷಿ ಅನುಸಂಧಾನ ಪರಿಷತ್‌ ನಿರ್ದೇಶನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಇಪ್ಕೋ ಸಂಸ್ಥೆ ಸಹಯೋಗದಲ್ಲಿ ವೃಕ್ಷಾರೋಹಣ ಅಭಿಯಾನ ಮತ್ತು ರೈತರ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ.ಎ.ಪಿ.ಮಲ್ಲಿಕಾರ್ಜುನಗೌಡ ಮಾತನಾಡಿ, ದೇಶದಾದ್ಯಂತ ಇಂದು 714 ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ಇಪ್ಕೋ ಸಂಸ್ಥೆ ಬೃಹತ್ ಪ್ರಮಾಣದಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಂಡು‌ ಪ್ರಧಾನಿ ಅವರ ಜನ್ಮದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಗಿಡಗಳಿಗೆ ಬೇಕಾಗುವ ಪ್ರಮುಖ ಮತ್ತು ಸೂಕ್ಷ್ಮ ಪೋಷಕಾಂಶಗಳ ಮಹತ್ವ ರೈತರು ಅರಿಯಬೇಕು ಎಂದರು.

ಕಾರ್ಯಕ್ರಮದಲ್ಲಿ ಇಪ್ಕೋ ಸಂಸ್ಥೆ ಕ್ಷೇತ್ರಾಧಿಕಾರಿ ಎಚ್.ಎಂ.ಸತೀಶ್‌ಕುಮಾರ್, ದೇಸಿ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಎನ್.ನಾಗಣ್ಣ, ಕೃಷಿ ಮಹಾವಿದ್ಯಾಲಯ, ವಿ.ಸಿ.ಫಾರಂ, ಕೃಷಿ ವಿಜ್ಞಾನ ಕೇಂದ್ರದ ಸಿಬ್ಬಂದಿ ಹಾಗೂ ರೈತರು ಭಾಗವಹಿಸಿದ್ದರು.

ADVERTISEMENT

ಕಾರ್ಯಕ್ರಮದ ಅಂಗವಾಗಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ 135 ಬೇವು ಮತ್ತು ಗೋಡಂಬಿ ಗಿಡಗಳನ್ನು ನೆಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.