ADVERTISEMENT

ದೊಡ್ಡಬಳ್ಳಾಪುರ | ನಿವೇಶನ ರಹಿತರಿಗೆ ನಿವೇಶನ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2025, 2:18 IST
Last Updated 1 ಆಗಸ್ಟ್ 2025, 2:18 IST
   

ದೊಡ್ಡಬಳ್ಳಾಪುರ: ನಗರಸಭೆ ವ್ಯಾಪ್ತಿಯಲ್ಲಿ ವಾಸಿಸುವ ನಿವೇಶನ ರಹಿತ ಹಾಗೂ ವಸತಿ ರಹಿತರಿಗೆ ಪ್ರಧಾನ ಮಂತ್ರಿ ಆವಾಸ್‌ ಯೋಜನೆ 2.0 ಅಡಿ ಸೂರು ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.

ನಗರಸಭೆ ವತಿಯಿಂದ ವಸತಿ, ನಿವೇಶನ ರಹಿರತ ಕುಟುಂಬಗಳನ್ನು ಗುರುತಿಸಲು ಸಮಿಕ್ಷೆ ಕೈಗೊಳ್ಳಲಾಗಿದೆ. ವಸತಿ, ನಿವೇಶನ ರಹಿತರ ಕುಟುಂಬದ ಫಲಾನುಭವಿಗಳು ನೇರವಾಗಿ ಕೇಂದ್ರ ಸರ್ಕಾರದ Unified web portal//URL: https/pma-urban.gov.in ಮುಖಾಂತರ ಆನ್‌ಲೈನ್‌ನಲ್ಲಿ ಆ.14ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವಸತಿ ಶಾಖೆಯ ವಿಷಯ ನಿರ್ವಾಹಕರನ್ನು ಸಂಪರ್ಕಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್‌ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT