ಪ್ರಧಾನಿ ನರೇಂದ್ರ ಮೋದಿ
ದೇವನಹಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 14ರಂದು ದೇವನಹಳ್ಳಿಗೆ ಆಗಮಿಸಲಿದ್ದಾರೆ. ಅಂದು ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ತಿಳಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾವೇಶಕ್ಕೆ ತಯಾರಿ ನಡೆದಿದೆ. ಕಾರ್ಯಕ್ರಮದಲ್ಲಿ ರಾಜ್ಯದ ಬಿಜೆಪಿ ವರಿಷ್ಠರು ಸೇರಿದಂತೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ ಕುಮಾರಸ್ವಾಮಿ, ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.