ADVERTISEMENT

ಒಂದೂವರೆ ವರ್ಷದ ನಂತರ ಪೋಕ್ಸೋ ಪ್ರಕರಣದ ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2024, 14:31 IST
Last Updated 6 ಸೆಪ್ಟೆಂಬರ್ 2024, 14:31 IST

ಪ್ರಜಾವಾಣಿ ವಾರ್ತೆ

ಮುಳಬಾಗಿಲು: ತಾಲ್ಲೂಕಿನ ಗ್ರಾಮವೊಂದರಲ್ಲಿ ವರ್ಷದ ಹಿಂದೆ ನಡೆದಿದ್ದ ಪೋಕ್ಸೊ ಪ್ರಕರಣದಲ್ಲಿ ಪರಾರಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಗುರುವಾರ ಮುಳಬಾಗಿಲು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಮುಳಬಾಗಿಲು ತಾಲ್ಲೂಕಿನ ಬಿ.ಹೊಸಹಳ್ಳಿ ಗ್ರಾಮದ ಚಿರಂಜೀವಿ (35) ಬಂಧಿತ.

ADVERTISEMENT

ಆರೋಪಿ ಬೆಂಗಳೂರಿನ ಸರ್ಜಾಪುರದಲ್ಲಿ ಇರುವ ಕುರಿತು ಮಾಹಿತಿ ಮೇರೆಗೆ ಗ್ರಾಮಾಂತರ ಸಬ್‌ಇನ್‌ ಸ್ಪೆಕ್ಟರ್ ವಿಠಲ್ ವೈ ತಳವಾರ್, ವೆಂಕಟರಾಘವನ್, ರಾಮಾಂಜಿ ಹಾಗೂ ನಾಗಾರ್ಜುನ ಸರ್ಜಾಪುರಕ್ಕೆ ಹೋಗಿ ಆರೋಪಿಯನ್ನು ಬಂಧಿಸಿ ಠಾಣೆಗೆ ಕರೆತಂದು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಘಟನೆಯ ಹಿನ್ನಲೆ: ಸುಮಾರು ಒಂದೂವರೆ ವರ್ಷದ ಹಿಂದೆ ಬಂಧಿತ ವ್ಯಕ್ತಿ ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಸಿ, ಬಾಲಕಿಯೊಂದಿಗೆ ಪರಾರಿಯಾಗಿ, ಮೂರು ತಿಂಗಳು ಬಾಲಕಿಯೊಂದಿಗೆ ಇದ್ದು ನಂತರ ಬಾಲಕಿಯನ್ನು ಗ್ರಾಮಕ್ಕೆ ವಾಪಸ್ ಕಳುಹಿಸಿ ತಲೆ ಮರೆಸಿಕೊಂಡಿದ್ದ. ಈ ವಿಚಾರವಾಗಿ ನೊಂದ ಬಾಲಕಿ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.