
ಪೋಕ್ಸೊ
(ಪ್ರಾತಿನಿಧಿಕ ಚಿತ್ರ)
ಆನೇಕಲ್: ಇಲ್ಲಿನ ಶಾಲೆಯೊಂದರಲ್ಲಿ 9 ಮಂದಿ ಬಾಲಕಿಯರಿಗೆ ಬ್ಯಾಡ್ ಟಚ್ ಮಾಡಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.
ಈ ಪ್ರಕರಣ ಸಂಬಂಧ ಆನೇಕಲ್ ಪೊಲೀಸರು, ಆರೋಪಿ ಕೃಷ್ಣಮೂರ್ತಿ ಅಲಿಯಾಸ್ ಕಿಟ್ಟಿಯನ್ನು ಬಂಧಿಸಲಾಗಿದೆ. ಶಾಲಾ ಶೌಚಾಲಯ ಸೇರಿದಂತೆ ವಿವಿಧೆಡೆ ಅನಧಿಕೃತವಾಗಿ ಪ್ರವೇಶ ಮಾಡಿ ಬಾಲಕಿಯರ ಜತೆ ಅಸಭ್ಯವಾಗಿ ವರ್ತಿಸಿದ್ದಾನೆ. ಬಾಲಕಿಯರಿಗೆ ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬುದಾಗಿ ಕೆಲವು ಮಕ್ಕಳು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿತ್ತು ಎಂದು ಶಾಲಾ ಮುಖ್ಯ ಶಿಕ್ಷಕ ತಿಳಿಸಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಗುರುಮೂರ್ತಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭೇಟಿ ನೀಡಿ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.
ಇಂತಹ ಘಟನೆಗಳ ಬಗ್ಗೆ ತಿಳಿಸಲು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಚೇರಿ ಅಥವಾ 1098ಕ್ಕೆ ಸಂಪರ್ಕಿಸಬಹುದು ಎಂದು ಬೆಂಗಳೂರು ಪಶ್ಚಿಮ ಜಿಲ್ಲಾ ಆನೇಕಲ್ ಮಕ್ಕಳ ರಕ್ಷಣಾಧಿಕಾರಿ ಆಶಾ ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.