ADVERTISEMENT

ಶೇ 96ರಷ್ಟು ಮಕ್ಕಳಿಗೆ ಪೋಲಿಯೊ ಹನಿ

​ಪ್ರಜಾವಾಣಿ ವಾರ್ತೆ
Published 19 ಜನವರಿ 2020, 14:14 IST
Last Updated 19 ಜನವರಿ 2020, 14:14 IST
ನಗರದ ಆರೋಗ್ಯ ಕೇಂದ್ರದಲ್ಲಿ ತಹಶೀಲ್ದಾರ್‌ ವರ್ಷ ಮಗುವಿಗೆ ಪೋಲಿಯೊ ಹನಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
ನಗರದ ಆರೋಗ್ಯ ಕೇಂದ್ರದಲ್ಲಿ ತಹಶೀಲ್ದಾರ್‌ ವರ್ಷ ಮಗುವಿಗೆ ಪೋಲಿಯೊ ಹನಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು   

ಕನಕಪುರ:ನಗರದ ಆರೋಗ್ಯ ಕೇಂದ್ರದಲ್ಲಿ ಪಲ್ಸ್‌ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ತಹಶೀಲ್ದಾರ್‌ ವರ್ಷ ಚಾಲನೆ ನೀಡಿದರು. ತಾಲ್ಲೂಕಿನಾದ್ಯಂತ ಯಶಸ್ವಿ ಲಸಿಕಾ ಕಾರ್ಯಕ್ರಮವಾಗಿ ಮೊದಲ ದಿನವೇ ಶೇ 96 ರಷ್ಟು ಗುರಿ ಸಾಧಿಸಲಾಗಿದೆ.

ತಾಲ್ಲೂಕಿನಲ್ಲಿರುವ 20 ಆರೋಗ್ಯ ಕೇಂದ್ರಗಳಲ್ಲೂ ಲಸಿಕಾ ಕಾರ್ಯಕ್ಕೆ ಏಕಕಾಲದಲ್ಲಿ ಚಾಲನೆ ನೀಡಲಾಯಿತು.

185 ಬೂತ್‌ಗಳನ್ನು ಮಾಡಿದ್ದು, ಒಂದು ಬೂತ್‌ನಲ್ಲಿ 4 ಸಿಬ್ಬಂದಿ ಕಾರ್ಯ ನಿರ್ವಹಿಸಿದ್ದಾರೆ. ಆರೋಗ್ಯ ಇಲಾಖೆ ಜತೆಗೆ ರೋಟರಿ ಸಂಸ್ಥೆ ಕಾರ್ಯ ನಿರ್ವಹಿಸಿದೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಆರೋಗ್ಯ ಇಲಾಖೆ ನೌಕರರೊಂದಿಗೆ ಕೆಲಸ ಮಾಡಿದ್ದಾರೆ.

ADVERTISEMENT

ತಾಲ್ಲೂಕಿನಲ್ಲಿ 22,906 ಮಕ್ಕಳಿದ್ದು ಅವರಲ್ಲಿ 21,996 ಮಕ್ಕಳಿಗೆ ಪೋಲಿಯೊ ಹನಿ ಹಾಕಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.

ಸೋಮವಾರ ಮತ್ತು ಮಂಗಳವಾರವು ಲಸಿಕಾ ಕಾರ್ಯಕ್ರಮ ಮುಂದುವರಿಯಲಿದ್ದು, ಲಸಿಕೆ ಹಾಕಿಸದ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸುವಂತೆ ಇಲಾಖೆ ಮನವಿ ಮಾಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.