ADVERTISEMENT

ಪೋಷಣ್ ಅಭಿಯಾನ ಮಾಸಾಚರಣೆ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2020, 2:28 IST
Last Updated 11 ಸೆಪ್ಟೆಂಬರ್ 2020, 2:28 IST
ರಾಷ್ಟ್ರೀಯ ಪೋಷಣ್ ಅಭಿಯಾನ ಮಾಸಾಚರಣೆ ಜಾಗೃತಿ ಭಿತ್ತಿಪತ್ರ ಪ್ರದರ್ಶಿಸಲಾಯಿತು
ರಾಷ್ಟ್ರೀಯ ಪೋಷಣ್ ಅಭಿಯಾನ ಮಾಸಾಚರಣೆ ಜಾಗೃತಿ ಭಿತ್ತಿಪತ್ರ ಪ್ರದರ್ಶಿಸಲಾಯಿತು   

ಕನಸವಾಡಿ (ದೊಡ್ಡಬಳ್ಳಾಪುರ): ತಾಲ್ಲೂಕಿನ ಕನಸವಾಡಿ ವೃತ್ತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಷ್ಟ್ರೀಯ ಪೋಷಣ್ ಅಭಿಯಾನ ಮಾಸಾಚರಣೆ, ಜಾಗೃತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಸಂಯೋಜಕಿ ತೇಜಸ್ವಿನಿ ಮಾತನಾಡಿ, ‘ಮಗು ಜನಿಸಿದ ಒಂದು ಗಂಟೆಯೊಳಗೆ ತಾಯಿಯ ಎದೆಹಾಲು ನೀಡುವುದನ್ನು ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗುತ್ತಿದೆ. ಈ ಬಗ್ಗೆ ಎಲ್ಲರೂ ಜಾಗೃತಿ ವಹಿಸಬೇಕು. ಗರ್ಭಿಣಿಯರು, ಬಾಣಂತಿಯರು ಯಾವುದೇ ಕಾರಣಕ್ಕೂ ಅಪೌಷ್ಟಿಕತೆಯಿಂದ ಹಾಗೂ ರಕ್ತಹೀನತೆಯಿಂದ ಬಳಲದಂತೆ ಸದಾ ನಿಗಾವಹಿಸಬೇಕು. ಇದರಿಂದ ಎರಡೂ ಜೀವಗಳು ಅನಾರೋಗ್ಯಕ್ಕೆ ತುತ್ತಾಗುವ ಅಪಾಯಗಳು ಹೆಚ್ಚಾಗಲಿವೆ. ಮನೆಯಂಗಳದಲ್ಲಿ ಕೈತೋಟ ಬೆಳೆಸುವುದು, ಮಕ್ಕಳಿಗೆ ಕೋಳಿ ಮೊಟ್ಟೆ, ಮೊಳಕೆ ಕಾಳು ತಿನ್ನಿಸುವುದು ಮೊದಲಾಗಿ ಒಂದು ತಿಂಗಳ ಕಾಲ ಪೋಷಣ್ ಅಭಿಯಾನ ಮಾಸಾಚರಣೆಯ ಉದ್ದೇಶವಾಗಿದೆ. ಈ ಕುರಿತಂತೆ ತಾಯಂದಿರಲ್ಲಿ ಅರಿವು ಮೂಡಿಸಲು ಅಂಗನವಾಡಿ ಕೇಂದ್ರಗಳಲ್ಲಿ ವಿವಿಧ ಕಾರ್ಯಕ್ರಮಗಳು ನಡೆಸಲಾಗುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT