ADVERTISEMENT

ಕನಕಪುರ: ಗಾಂಜಾಗಿಡ ವಶ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 2:30 IST
Last Updated 2 ಅಕ್ಟೋಬರ್ 2020, 2:30 IST
ರೇಷ್ಮೆ ತೋಟದಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡ ಪೊಲೀಸರು
ರೇಷ್ಮೆ ತೋಟದಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡ ಪೊಲೀಸರು   

ಕನಕಪುರ: ತಾಲ್ಲೂಕಿನ ಹೊಸದೊಡ್ಡಿ ಗ್ರಾಮದ ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಪೊಲೀಸರು ಪತ್ತೆಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ.

ಗ್ರಾಮದ ಚಿನ್ನಸ್ವಾಮಿ ರೇಷ್ಮೆ ತೋಟ ಮತ್ತು ರಾಗಿ ಬೆಳೆ ಮಧ್ಯದಲ್ಲಿ ಮಿಶ್ರ ಬೆಳೆಯಾಗಿ ಗಾಂಜಾಗಿಡಗಳನ್ನು ಬೆಳೆದು ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕ್ಷಣ ಇಲಾಖೆ ಕ್ಷೇತ್ರ ಸಮನ್ವಯ ಅಧಿಕಾರಿ ಶ್ರೀನಿವಾಸ್‌ ಸಮಕ್ಷಮದಲ್ಲಿ ವಶಪಡಿಸಿಕೊಂಡ ಗಾಂಜಾ ಗಿಡಗಳನ್ನು ಮಹಜರು ಮಾಡಲಾಯಿತು. 6ಕೆ.ಜಿ.ಯಷ್ಟು ಗಾಂಜಾ ಸೊಪ್ಪು ಸಿಕ್ಕಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.