ಆನೇಕಲ್: ಬೆಂಗಳೂರಿನಲ್ಲಿ ಆಯೋಜಿಸಿದ್ದ 13ನೇ ರಾಜ್ಯ ಮಟ್ಟದ ಅಂಚೆ ಚೀಟಿಗಳ ಪ್ರದರ್ಶನ ಕರ್ನಾಪೆಕ್ಸ್ 2024 ಅಂಚೆ ಚೀಟಿಗಳ ಹಬ್ಬದಲ್ಲಿ ತಾಲ್ಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನದ ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಗಿದೆ ಎಂದು ಜೈವಿಕ ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಎ.ವಿ.ಸೂರ್ಯಸೇನ್ ತಿಳಿಸಿದರು.
ಬನ್ನೇರುಘಟ್ಟ ಜೈವಿಕ ಉದ್ಯಾನದ ವಿಶೇಷ ಅಂಚೆ ಲಕೋಟೆಯಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನದ ವಿವಿಧ ಮಾಹಿತಿ ಒಳಗೊಂಡಿವೆ. ಸಫಾರಿ, ಜೈವಿಕ ಉದ್ಯಾನ, ಚಿಟ್ಟೆ ಪಾರ್ಕ್‌ನ ಮಾಹಿತಿ ಇದೆ. ಉದ್ಯಾನದಲ್ಲಿ 100 ಜಾತಿ ಎರಡು ಸಾವಿರಕ್ಕೂ ಹೆಚ್ಚು ಪ್ರಾಣಿಗಳು ಹೊಂದಿರುವ ಬಗ್ಗೆ ಮಾಹಿತಿ ಇದೆ. ಉದ್ಯಾನದಲ್ಲಿ ಸಸ್ಯಗಳು ಮತ್ತು ಪ್ರಾಣಿಗಳ ಬಗೆಗಿನ ಜಾಗೃತಿಯ ಚಿತ್ರಗಳಿವೆ. ಈ ಲಕೋಟೆಯನ್ನು ವಿಜ್ಞಾನ ಮತ್ತು ತಂತ್ರಜ್ಞಾನದ ವಿಷಯದಡಿ ಬಿಡುಗಡೆ ಮಾಡಲಾಗಿದೆ ಎಂದರು.
ಅಂಚೆ ಚೀಟಿಗಳ ಹಬ್ಬದಲ್ಲಿ ಅಣ್ಯ ಇಲಾಖೆಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಸುಭಾಷ್.ಎಂ.ಮಾಲ್ಪೆಡೆ, ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಡಾ.ಹರಿಣಿ ನಾಗೇಂದ್ರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.