ADVERTISEMENT

ಆನೇಕಲ್| ಲಾರಿ ಡಿಕ್ಕಿ: ಅಂಚೆ ಪೇದೆ ಸಾವು

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2025, 2:29 IST
Last Updated 9 ನವೆಂಬರ್ 2025, 2:29 IST
ಚಂದಾಪುರದ ಕಿತ್ತಗಾನಹಳ್ಳಿ ಗೇಟ್ನಲ್ಲಿ ಲಾರಿ ಮತ್ತು ಬೈಕ್ ನಡುವೆ ಅಪಘಾತ ನಡೆದಿರುವುದು
ಚಂದಾಪುರದ ಕಿತ್ತಗಾನಹಳ್ಳಿ ಗೇಟ್ನಲ್ಲಿ ಲಾರಿ ಮತ್ತು ಬೈಕ್ ನಡುವೆ ಅಪಘಾತ ನಡೆದಿರುವುದು   

ಆನೇಕಲ್: ತಾಲ್ಲೂಕಿನ ಚಂದಾಪುರ ಸೂರ್ಯಸಿಟಿ ಪೊಲೀಸ್‌ ಠಾಣೆ ವ್ಯಾಪ್ತಿಯ ಕಿತ್ತಗಾನಹಳ್ಳಿ ಗೇಟ್‌ ಬಳಿ ಶನಿವಾರ ಅಂಚೆ ವಿತರಣೆಗೆ ತೆರಳುತ್ತಿದ್ದ ಮಹಿಳೆಯ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದು ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪರಿಣಾಮ ಅಂಚೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಪ್ರಿಯ ಮೃತರು. ಬೈಕ್‌ನಲ್ಲಿ ಪೋಸ್ಟ್‌ ಕೊಡಲು ಹೋಗುತ್ತಿದ್ದಾಗ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಚಕ್ರ ಹರಿದ ಪರಿಣಾಮ ಪ್ರಿಯ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಚಂದಾಪುರ ಸೂರ್ಯಸಿಟಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರದಲ್ಲಿ ಸೆರೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT