
ದೊಡ್ಡಬಳ್ಳಾಪುರ: ನಗರದ ತೇರಿನ ಬೀದಿಯಲ್ಲಿನ ಪ್ರಸನ್ನ ಚಂದ್ರಮೌಳೇಶ್ವರ ಸ್ವಾಮಿ ರಥೋತ್ಸವ ಸೋಮವಾರ ವಿಜೃಂಭಣೆಯಿಂದ ನೆರವೇರಿತು. ವಿವಿಧೆಡೆಗಳಿಂದ ಆಗಮಿಸಿದ್ದ ನೂರಾರು ಜನ ಭಕ್ತರು ರಥಕ್ಕೆ ಬಾಳೆಹಣ್ಣು, ದವನ ಅರ್ಪಿಸಿ ಧನ್ಯತಾ ಭಾವ ಮೆರೆದರು.
ರಥೋತ್ಸವದಲ್ಲಿ ಶಾಸಕ ಧೀರಜ್ ಮುನಿರಾಜು, ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ತಹಸೀಲ್ದಾರ್ ಮಲ್ಲಪ್ಪ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ಉಪಾಧ್ಯಕ್ಷ ಎಂ.ಮಲ್ಲೇಶ್, ಪೌರಾಯುಕ್ತ ಕಾರ್ತಿಕೇಶ್ವರ ಭಾಗವಹಿಸಿದ್ದರು.
ಶ್ರೀಕಂಠೇಶ್ವರ ಭಕ್ತ ಮಂಡಲಿ, ನಂಜುಂಡೇಶ್ವರ ಸೇವಾ ಸಮಿತಿ, ಶ್ರೀಮುತ್ಯಾಲಮ್ಮ ಸೇವಾ ಸಮಿತಿ ಸೇರಿದಂತೆ ವಿವಿಧ ಅರವಂಟಿಗೆ ಸಮಿತಿಗಳಿಂದ ಜಾತ್ರೆಗೆ ಆಗಮಿಸಿದ್ದ ಭಕ್ತಾದಿಗಳಿಗೆ ಅರವಂಟಿಗೆ ಹಾಗೂ ಪ್ರಸಾದ ವಿನಿಯೋಗ ನಡೆಯಿತು.
ರಥೋತ್ಸವದ ಅಂಗವಾಗಿ ನ.18 ರಂದು ಹಗಲು ಪರಿಷೆ, ಅಶ್ವವಾಹನೋತ್ಸವ, ವೀರಭದ್ರನ ಕುಣಿತವಿದೆ. ಡಿ.13 ರವರೆಗೆ ದೇವಾಲಯದಲ್ಲಿ ಪ್ರಾಕಾರೋತ್ಸವ ಹಾಗೂ ವಿಶೇಷ ಪೂಜಾ ಕಾರ್ಯಾಕ್ರಮಗಳು ನಡೆಯಲಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.