ADVERTISEMENT

ಹಿರಿಯರಿಗೆ ಗೌರವ ನೀಡಲು ಸಲಹೆ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2020, 2:26 IST
Last Updated 23 ಅಕ್ಟೋಬರ್ 2020, 2:26 IST
ಶ್ರೀನಿವಾಸಪುರದ ವೆಂಕಟೇಶ್ವರ ಪ್ಯಾರಾ ಮೆಡಿಕಲ್‌ ಕಾಲೇಜಿನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಹಾಗೂ ಹಿರಿಯ ನಾಗರಿಕರನ್ನು ಸನ್ಮಾನಿಸಲಾಯಿತು
ಶ್ರೀನಿವಾಸಪುರದ ವೆಂಕಟೇಶ್ವರ ಪ್ಯಾರಾ ಮೆಡಿಕಲ್‌ ಕಾಲೇಜಿನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಹಾಗೂ ಹಿರಿಯ ನಾಗರಿಕರನ್ನು ಸನ್ಮಾನಿಸಲಾಯಿತು   

ಶ್ರೀನಿವಾಸಪುರ: ‘ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡುವುದರ ಜತೆಗೆ ಹಿರಿಯರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಬೇಕು’ ಎಂದು ವೆಂಕಟೇಶ್ವರ ಗ್ರಾಮೀಣ ಆರೋಗ್ಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ವೈ.ವಿ. ವೆಂಕಟಾಚಲ ಸಲಹೆ ನೀಡಿದರು.

ಪಟ್ಟಣದ ವೆಂಕಟೇಶ್ವರ ಪ್ಯಾರಾ ಮೆಡಿಕಲ್‌ ಕಾಲೇಜಿನ ಸಭಾಂಗಣದಲ್ಲಿ ಡಾ.ಪ್ರಭಾಕರರೆಡ್ಡಿ ಚಾರಿಟೇಬಲ್‌ ಎಜುಕೇಷನಲ್‌ ಫೌಂಡೇಷನ್‌ ಹಾಗೂ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.

ಪ್ರತಿಭಾವಂತ ಮಕ್ಕಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಅಭಿನಂದನಾ ಪತ್ರ ನೀಡಿ ಸನ್ಮಾನಿಸಲಾಗುತ್ತಿದೆ ಎಂದು ಹೇಳಿದರು.

ADVERTISEMENT

ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಡಾ.ಗುಣವಂತ ಮಂಜು ಮಾತನಾಡಿ, ‘ಪ್ರತಿಷ್ಠಾನದಿಂದ ರಾಜ್ಯದಲ್ಲಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವ ಕಾರ್ಯವು ನಿರಂತರವಾಗಿ ನಡೆಯುತ್ತಿದೆ. ಇದರಿಂದ ವಿದ್ಯಾರ್ಥಿಗಳು ಸಾಧನೆಯ ಹಾದಿ ಹಿಡಿಯಲು ರಹದಾರಿಯಾಗಲಿದೆ’ ಎಂದು ಹೇಳಿದರು.

ಇದೇ ವೇಳೆ 107 ವರ್ಷ ವಯಸ್ಸಿನ ಹಿರಿಯ ನಾಗರಿಕ ನಾರಾಯಣಪ್ಪ ಅವರನ್ನು ಸನ್ಮಾನಿಸಲಾಯಿತು. ಪ್ರಾಂಶುಪಾಲ ಪಿ. ಶೀನಪ್ಪ, ಜಿಲ್ಲಾ ಜನಪದ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮುನಿವೆಂಕಟೇಗೌಡ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.