ADVERTISEMENT

ನಂದಗುಡಿ | ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ವೇದಿಕೆ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2025, 5:13 IST
Last Updated 21 ನವೆಂಬರ್ 2025, 5:13 IST
ಹೊಸಕೋಟೆ ತಾಲ್ಲೂಕಿನ ನಂದಗುಡಿಯಲ್ಲಿರುವ ಕೆಪಿಎಸ್ ಪ್ರಿಎಂಶ್ರೀ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ಛದ್ಮವೇಷದಲ್ಲಿ ಮಕ್ಕಳು
ಹೊಸಕೋಟೆ ತಾಲ್ಲೂಕಿನ ನಂದಗುಡಿಯಲ್ಲಿರುವ ಕೆಪಿಎಸ್ ಪ್ರಿಎಂಶ್ರೀ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ಛದ್ಮವೇಷದಲ್ಲಿ ಮಕ್ಕಳು   

ನಂದಗುಡಿ (ಹೊಸಕೋಟೆ): ಗ್ರಾಮದ ಪ್ರಿಎಂಶ್ರೀ ಕೆಪಿಎಸ್ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು. ನಂದಗುಡಿ ಕ್ಲಸ್ಟರ್ ವ್ಯಾಪ್ತಿಗೆ ಒಳಪಡುವ 20 ಶಾಲೆಗಳ 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಎಸ್‌ಡಿಎಂಸಿ ಉಪಾಧ್ಯಕ್ಷ ಎನ್.ಗಂಗಾಧರ್, ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಯಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ. ಪ್ರತಿಭಾ ಕಾರಂಜಿ ಪ್ರತಿ ಮಗುವು ಸಹ ಸ್ವಯಂ ಪ್ರೇರಣೆಯಿಂದ ಭಾಗವಹಿಸುವಂತೆ ಮಾಡುತ್ತದೆ. ಶಿಕ್ಷಕರು ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ, ಪ್ರೋತ್ಸಾಹ ನೀಡಬೇಕು. ಅವರಲ್ಲಿರುವ ಕೀಳರಿಮೆ ಹಾಗೂ ಸಂಕುಚಿತ ಮನೋಭಾವವನ್ನು ದೂರು ಮಾಡಬೇಕೆಂದು ಹೇಳಿದರು.

ನಂದಗುಡಿ ವಲಯದ ಸಿಆರ್‌ಪಿ ಸತೀಶ್ ಕುಮಾರ್, ಪ್ರತಿಭಾ ಕಾರಂಜಿ ಮಕ್ಕಳಲ್ಲಿನ ಗುಪ್ತ ಪ್ರತಿಭೆಯನ್ನು ಹೊರತರುತ್ತದೆ. ಜೊತೆಗೆ ಅವರಲ್ಲಿ ಕಲಿಕೆಗೆ ಹೊಸದಾದ ಜೀವನ ಕೌಶಲ್ಯ ಹೊಂದಲು ವೇದಿಕೆಯಾಗಿದೆ ಎಂದು ಹೇಳಿದರು.

ADVERTISEMENT

ಗ್ರಾ.ಪಂ ಸದಸ್ಯ ಎನ್.ಎನ್. ಮಂಜುನಾಥ್, ಮುಖ್ಯಶಿಕ್ಷಕ ಡಿ.ಕೃಷ್ಣಪ್ಪ, ನಂದೀಶ್, ಕೆ.ರಮೇಶ್, ಗೋಪಾಲಪ್ಪ, ಮಂಜುನಾಥ್, ಆಂಜಿನಪ್ಪ, ಸುಮಿತ್ರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.