ADVERTISEMENT

ಕೋವಿಡ್‌ ಲಸಿಕೆ ಸಂಗ್ರಹಕ್ಕೆ ಸಿದ್ಧತೆ ಪೂರ್ಣ

​ಪ್ರಜಾವಾಣಿ ವಾರ್ತೆ
Published 8 ಜನವರಿ 2021, 5:24 IST
Last Updated 8 ಜನವರಿ 2021, 5:24 IST
ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್‌ ಲಸಿಕೆ ಸಂಗ್ರಹಕ್ಕೆ ಸಿದ್ದವಾಗಿರುವ ಶೀಥಲ ಪೆಟ್ಟಿಗೆಗಳು
ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್‌ ಲಸಿಕೆ ಸಂಗ್ರಹಕ್ಕೆ ಸಿದ್ದವಾಗಿರುವ ಶೀಥಲ ಪೆಟ್ಟಿಗೆಗಳು   

ದೊಡ್ಡಬಳ್ಳಾಪುರ: ಕೊರೊನಾ ಸೋಂಕು ತಡೆಗಟ್ಟಲು ನೀಡಲಾಗುವ ಲಸಿಕೆ ಸಂಗ್ರಹಕ್ಕೆ ಅಗತ್ಯ ಇರುವ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ನಗರದ ಸರ್ಕಾರಿ ಆಸ್ಪತ್ರೆ ವೈದ್ಯ ಡಾ.ರಮೇಶ್‌ ತಿಳಿಸಿದ್ದಾರೆ.

ಕೋವಿಡ್‌ ಲಸಿಕೆ ನೀಡುವ ಕುರಿತಂತೆ ಆರೋಗ್ಯ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಲಸಿಕೆ ನೀಡಿಕೆ ಕುರಿತಂತೆ ರಾಜ್ಯ ಸರ್ಕಾರದಿಂದ ಬರುವ ಮಾರ್ಗದರ್ಶಿ ಸೂಚನೆಗಳ ಅನುಸಾರ ಲಸಿಕೆ ನೀಡಲಾಗುವುದು. ಒಂದೆರಡು ವಾರಗಳಲ್ಲಿ ಕೋವಿಡ್‌ ಲಸಿಕೆ ಇಲ್ಲಿಗೆ ಬರುವ ನಿರೀಕ್ಷೆ ಇದೆ. ಶುಕ್ರವಾರ ಲಸಿಕೆ ನೀಡುವ ಕುರಿತಂತೆ ಅಣುಕು ಪ್ರದರ್ಶನದ ತರಬೇತಿಯು ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT