ADVERTISEMENT

ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಸಿ. ರಾಮಕೃಷ್ಣ ಆಯ್ಕೆ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2020, 4:06 IST
Last Updated 15 ಅಕ್ಟೋಬರ್ 2020, 4:06 IST
ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬುಜಗಜೀವನ್ ರಾಂ ಕ್ರೇಡಿಟ್ ಕೋ-ಅಪರೇಟಿವ್‌ ಸೊಸೈಟಿ ಅಧ್ಯಕ್ಷರು, ನಿರ್ದೇಶಕರನ್ನು ಅಭಿನಂದಿಸಲಾಯಿತು
ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬುಜಗಜೀವನ್ ರಾಂ ಕ್ರೇಡಿಟ್ ಕೋ-ಅಪರೇಟಿವ್‌ ಸೊಸೈಟಿ ಅಧ್ಯಕ್ಷರು, ನಿರ್ದೇಶಕರನ್ನು ಅಭಿನಂದಿಸಲಾಯಿತು   

ದೊಡ್ಡಬಳ್ಳಾಪುರ:ನಗರದ ಡಾ.ಬಿ.ಆರ್. ಅಂಬೇಡ್ಕರ್, ಡಾ.ಬಾಬುಜಗಜೀವಂರಾಂ ಕ್ರೆಡಿಟ್ ಕೋ–ಆಪರೇಟಿವ್ ಸೊಸೈಟಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸಿ. ರಾಮಕೃಷ್ಣಪ್ಪ ಮತ್ತು ಉಪಾಧ್ಯಕ್ಷರಾಗಿ ಬಚ್ಚಹಳ್ಳಿ ನಾಗರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನೂತನ ಅಧ್ಯಕ್ಷ ರಾಮಕೃಷ್ಣ ಮಾತನಾಡಿ, ತಾಲ್ಲೂಕಿನಲ್ಲಿ ದಲಿತ ಸಮುದಾಯದ ಏಳಿಗೆಗಾಗಿ ಬ್ಯಾಂಕ್ ಸ್ಥಾಪನೆ ಮಾಡಬೇಕು ಎಂಬ ಬಹುದಿನಗಳ ಕನಸು ನನಸಾಗಿದೆ. ಜನಾಂಗವನ್ನು ಆರ್ಥಿವಾಗಿ ಸದೃಢಗೊಳಿಸುವುದೇ ಸೊಸೈಟಿಯ ಮೂಲ ಗುರಿ. ಈಗಾಗಲೇ ತಾಲ್ಲೂಕಿನ ಎಲ್ಲಾ ಗ್ರಾಮಗಳಿಂದಲೂ ಸುಮಾರು 500 ಮಂದಿ ಬ್ಯಾಂಕಿನ ಸದಸ್ಯರಾಗಿದ್ದಾರೆ ಎಂದರು.

ಮುಂದಿನ ದಿನಗಳಲ್ಲಿ ಮತ್ತಷ್ಟು ಜನರನ್ನು ಸೊಸೈಟಿಯ ಸದಸ್ಯರಾಗುವಂತೆ ಪ್ರಚಾರ ಕೈಗೊಳ್ಳಲಾಗುವುದು. ಇದು ಒಬ್ಬ ವ್ಯಕ್ತಿಗೆ ಸೇರಿದ ಸೊಸೈಟಿಯಲ್ಲ. ಸಮುದಾಯದ ಎಲ್ಲರೂ ಒಟ್ಟಾಗಿ ಶ್ರಮಿಸಿದಾಗ ಮಾತ್ರ ಸೊಸೈಟಿಯು ಯಶಸ್ಸಿಯಾಗಿ ನಡೆಯಲು ಸಾಧ್ಯ. ಸೊಸೈಟಿಯಿಂದ ಪಡೆದ ಸಾಲವನ್ನು ಸದ್ವಿನಿಯೋಗ ಮಾಡಿಕೊಂಡು ಸಕಾಲದಲ್ಲಿ ಮರುಪಾವತಿ ಮಾಡಬೇಕು. ಇದರಿಂದ ಮತ್ತಷ್ಟು ಜನರಿಗೆ ಸಾಲ ಸೌಲಭ್ಯ ಕಲ್ಪಿಸಲು ಅನುಕೂಲವಾಗಲಿದೆ ಎಂದರು.

ADVERTISEMENT

ಸೊಸೈಯಟಿ ನಿರ್ದೇಶಕರಾದ ಎಂ. ಮುನಿರಾಜು, ನಾಗರಾಜು ಎಚ್. ತಾಳವಾರ್, ರಾಜಘಟ್ಟ ಕಾಂತರಾಜು, ಕನ್ಯಾಕುಮಾರಿ ಶ್ರೀನಿವಾಸ್, ಚನ್ನಮ್ಮ ಆರ್.ಸಿ. ರಾಮಲಿಂಗಯ್ಯ, ಆರ್.ಎಂ. ಮುನಿರಾಜು, ತೂಬಗೆರೆ ವೆಂಕಟೇಶ್, ಕೆಂಪರಾಜು, ಆಂಜನಮೂರ್ತಿ, ಕೃಷ್ಣಮೂರ್ತಿ, ವೆಂಕಟರಮಣಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.