ಆನೇಕಲ್: ತಾಲ್ಲೂಕಿನ ಬೆಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಹುಲಿಮಂಗಲ ಗ್ರಾಮ ಪಂಚಾಯಿತಿ ಕೊಪ್ಪ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಂ.ಕೃಷ್ಣಪ್ಪ ಭೂಮಿ ಪೂಜೆ ನೆರವೇರಿಸಿದರು.
ನಂತರ ಮಾತನಾಡಿ, ಕೊಪ್ಪ ಗ್ರಾಮದಿಂದ ಬೇಗೂರು ಗ್ರಾಮ, ಬಿಂಗಿಪುರ ರಸ್ತೆ, ಪೋಡು ಗ್ರಾಮಕ್ಕೆ ಸಂಪರ್ಕ ರಸ್ತೆ ಇದಾಗಿದೆ. ರಸ್ತೆಗಳ ಅಭಿವೃದ್ಧಿಯಿಂದಾಗಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ನೆರವಾಗಲಿದೆ. ಗ್ರಾಮೀಣ ಪ್ರದೇಶದಿಂದ ನಗರಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಪಡಿಸಲು ಆದ್ಯತೆ ನೀಡಲಾಗಿದೆ ಎಂದರು.
ಹುಲಿಮಂಗಲ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕೊಪ್ಪ ಗೇಟ್ ಮುನಿರಾಜು, ಜಗದೀಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.