ADVERTISEMENT

ವೇಶ್ಯಾವಾಟಿಕೆ ಇಬ್ಬರ ಬಂಧನ, ಮಹಿಳೆ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2023, 13:18 IST
Last Updated 21 ಸೆಪ್ಟೆಂಬರ್ 2023, 13:18 IST
   

ಬಾಗೇಪಲ್ಲಿ: ಟಿ.ಬಿ.ಕ್ರಾಸ್‌ನಲ್ಲಿರುವ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಒಬ್ಬ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.

ಆಂಧ್ರಪ್ರದೇಶದ ಸಾಮಲಪಲ್ಲಿ ಗ್ರಾಮದ ಆನಂದ ಹಾಗೂ ಟಿ.ಬಿ.ಕ್ರಾಸ್‌ನ ಅರವಿಂದ ಬಂಧಿತ ಆರೋಪಿಗಳು.

ಖಚಿತ ಮಾಹಿತಿ ಮೇರೆಗೆ ಸರ್ಕಲ್ ಇನ್‌ಸ್ಪೆಕ್ಟರ್‌ ಪ್ರಶಾಂತ್ ಆರ್. ವರ್ಣಿ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ರಕ್ಷಿಸಿರುವ ಮಹಿಳೆಯನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ. ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.