ADVERTISEMENT

ಅಮಾನತು ಮಾಡುವಂತೆ ನೌಕರರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 25 ಜೂನ್ 2018, 15:56 IST
Last Updated 25 ಜೂನ್ 2018, 15:56 IST
ಪಿವಿಇಸಿ 60025 ಡಿಬಿಪಿ 7 ಇಪಿ: ಕಂದಾಯ ಇಲಾಖೆ ನೌಕರರು ಪ್ರತಿಭಟನೆ ನಡೆಸಿದರು
ಪಿವಿಇಸಿ 60025 ಡಿಬಿಪಿ 7 ಇಪಿ: ಕಂದಾಯ ಇಲಾಖೆ ನೌಕರರು ಪ್ರತಿಭಟನೆ ನಡೆಸಿದರು   

ದೊಡ್ಡಬಳ್ಳಾಪುರ: ಕಂದಾಯ ಇಲಾಖೆ ರಾಜ್ಯ ಘಟಕದ ಅಧ್ಯಕ್ಷ ವಿಜಯಕುಮಾರ್‌ ಅವರನ್ನು ಅವಾಚ್ಚವಾಗಿ ನಿಂಧಿಸಿದನ್ನು ಖಂಡಿಸಿ ಸೋಮವಾರ ಗ್ರಾಮಾಂತರ ಜಿಲ್ಲೆಯ ಎಲ್ಲ ತಾಲ್ಲೂಕುಗಳ ಕಂದಾಯ ಇಲಾಖೆ ನೌಕರರು ಹಾಗೂ ದೊಡ್ಡಬಳ್ಳಾಪುರ ಉಪವಿಭಾಗದ ಕಂದಾಯ ನೌಕರರು ಬೆಂಗಳೂರಿನ ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿನ ಕಂದಾಯ ಇಲಾಖೆ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ವಿಜಯ್‌ಕುಮಾರ್‌ ಮಾತನಾಡಿ, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಥಮ ದರ್ಜೆ ಸಹಾಯಕ ನವೀನ್‌ಕುಮಾರ್‌ ಬಡ್ತಿ ವಿಚಾರದಲ್ಲಿ ಅನವಶ್ಯಕವಾಗಿ ನನ್ನ ವಿರುದ್ದ ಅವಾಚ್ಯವಾಗಿ ಮಾತನಾಡಿದ್ದಾರೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಈ ಕೂಡಲೇ ನವೀನ್‌ಕುಮಾರ್‌ ಅವರನ್ನು ಅಮಾನತು ಮಾಡುವಂತೆ ಜಿಲ್ಲೆಯ ಎಲ್ಲ ತಾಲ್ಲೂಕು ಕಂದಾಯ ಇಲಾಖೆ ನೌಕರರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಬಡ್ತಿಗೆ ಮನವಿ: ಸರ್ಕಾರದ ನಿಯಮದಂತೆ ಕಾನೂನುಬದ್ಧವಾಗಿ ದೊರೆಯಬೇಕಾದ ಬಡ್ತಿಗೆ ವಿಜಯ್‌ಕುಮಾರ್‌ ಅವರಲ್ಲಿ ಮನವಿ ಮಾಡಲಾಗಿತ್ತೇ ವಿನಾ, ಯಾರನ್ನೂ ನಿಂದಿಸಿಲ್ಲ ಎಂದು ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯಲ್ಲಿನ ಪ್ರಥನ ದರ್ಜೆ ಸಹಾಯಕ ನವೀನ್‌ಕುಮಾರ್‌ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.