ADVERTISEMENT

ಎಲ್‌ಐಸಿ ಖಾಸಗೀಕರಣ ಪ್ರಸ್ತಾವಕ್ಕೆ ವಿರೋಧ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2019, 13:21 IST
Last Updated 2 ಆಗಸ್ಟ್ 2019, 13:21 IST
ಕನಕಪುರ ಎಲ್‌ಐಸಿ ಶಾಖೆ ಮುಂಭಾಗ ನೌಕರರು ಪ್ರತಿಭಟನೆ ನಡೆಸಿದರು
ಕನಕಪುರ ಎಲ್‌ಐಸಿ ಶಾಖೆ ಮುಂಭಾಗ ನೌಕರರು ಪ್ರತಿಭಟನೆ ನಡೆಸಿದರು   

ಕನಕಪುರ: ಜೀವ ವಿಮಾ ನಿಗಮ ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ಪ್ರಸ್ತಾವ ವಿರೋಧಿಸಿ ಎಲ್‌ಐಸಿ ಶಾಖೆ ನೌಕರರು ಶುಕ್ರವಾರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ವಿಮಾ ನೌಕರರಾದ ಚಂದ್ರು, ಮಹದೇವರಾವ್‌, ನರಸಿಂಹಮೂರ್ತಿ, ಗೋಪಾಲಕೃಷ್ಣ ಮಾತನಾಡಿ, ವಿಮಾ ಕ್ಷೇತ್ರದಲ್ಲಿ ವಿದೇಶಿ ಬಂಡವಾಳ ಹೂಡಿಕೆಗೆ ಅವಕಾಶ ನೀಡುವುದು ಮತ್ತು ಸಾರ್ವಜನಿಕ ಸಂಸ್ಥೆಗಳನ್ನು ಖಾಸಗೀಕರಣ ಮಾಡುವುದು ಸರಿಯಾದ ಕ್ರಮವಲ್ಲ ಎಂದು ಸರ್ಕಾರದ ನೀತಿ ಖಂಡಿಸಿದರು.

ಎಲ್‌ಐಸಿ ಸಂಸ್ಥೆ ವಿಶ್ವದಲ್ಲೇ ಅಗ್ರಮಾನ್ಯ ಸಂಸ್ಥೆಯಾಗಿದೆ. 30ಕೋಟಿಗೂ ಹೆಚ್ಚಿನ ಗ್ರಾಹಕರನ್ನು ಹೊಂದಿ ವಿಶ್ವಾಸ ಗಳಿಸಿರುವಂತ ದೊಡ್ಡ ಸಂಸ್ಥೆಯಾಗಿದೆ. ಅಲ್ಲದೆ, ದೇಶದ ಆರ್ಥಿಕ ಪ್ರಗತಿಗೆ ಅಪಾರ ಕೊಡುಗೆ ನೀಡುತ್ತಾ ಬಂದಿದೆ. ಸರ್ಕಾರದ ಈ ಕ್ರಮ ದೇಶದ ಆರ್ಥಿಕ ಪ್ರಗತಿಗೆ ಮತ್ತು ಅಭಿವೃದ್ಧಿಗೆ ಮಾರಕವಾಗಲಿದೆ ಎಂದು ಎಚ್ಚರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.