ADVERTISEMENT

ಪೊಲೀಸರ ಅಮಾನಾತು ವಾಪಸ್‌ ಪಡೆಯಿರಿ: ಕರವೇ ಕನ್ನಡಿಗರ ಬಣ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಜೂನ್ 2025, 14:05 IST
Last Updated 7 ಜೂನ್ 2025, 14:05 IST
ಪೊಲೀಸರ ಅಮಾತು ಆದೇಶ ರದ್ದುಪಡಿಸುವಂತೆ ಆಗ್ರಹಿಸಿ ದೊಡ್ಡಬಳ್ಳಾಪುರದ ಸಿದ್ದಲಿಂಗಯ್ಯ ವೃತ್ತದಲ್ಲಿ ಶನಿವಾರ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಗರ ಬಣದಿಂದ ಪ್ರತಿಭಟನೆ ನಡೆಯಿತು
ಪೊಲೀಸರ ಅಮಾತು ಆದೇಶ ರದ್ದುಪಡಿಸುವಂತೆ ಆಗ್ರಹಿಸಿ ದೊಡ್ಡಬಳ್ಳಾಪುರದ ಸಿದ್ದಲಿಂಗಯ್ಯ ವೃತ್ತದಲ್ಲಿ ಶನಿವಾರ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಗರ ಬಣದಿಂದ ಪ್ರತಿಭಟನೆ ನಡೆಯಿತು   

ದೊಡ್ಡಬಳ್ಳಾಪುರ: ಬೆಂಗಳೂರಿನಲ್ಲಿ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ದುರಂತ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಗರ ಬಣದ ವತಿಯಿಂದ ಶನಿವಾರ ನಗರದ ಸಿದ್ದಲಿಂಗಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸರ್ಕಾರ ಯಾವುದೇ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳದೆ ಕಾರ್ಯಕ್ರಮ ಆಯೋಜನೆ ಮಾಡಿದ್ದೇ ಅನಾಹುತಕ್ಕೆ ಕಾರಣ. ರಾಜಕೀಯ ನಾಯಕರ ಪ್ರಚಾರಕ್ಕಾಗಿ ತರಾತುರಿಯಲ್ಲಿ ಅಭಿನಂದನಾ ಸಮಾರಂಭ ಮಾಡಿದ ಪರಿಣಾಮ 11 ಮಂದಿ ಜೀವ ಕಳೆದುಕೊಂಡಿದ್ದಾರೆ. ರಾಜ್ಯ ಸರ್ಕಾರವೇ ಈ ಅನಾಹುತಕ್ಕೆ ನೇರ ಹೊಣೆ ಎಂದು ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ರಮೇಶ್ ಆರೋಪಿಸಿದರು.

ಪೊಲೀಸರ ಸಮಯ ಪ್ರಜ್ಞೆಯಿಂದಲೇ ಹೆಚ್ಚಿನ ಜೀವ ಹಾನಿ ಆಗುವುದು ತಪ್ಪಿದೆ. ಹೀಗಿದ್ದರೂ ಏನೂ ತಪ್ಪು ಮಾಡದೆ ಜೀವದ ಮೇಲಿನ ಹಂಗು ತೊರೆದು ರಾತ್ರಿ ಹಗಲೆನ್ನದೆ ಕರ್ತವ್ಯ ನಿರ್ವಹಿಸಿರುವ ಪೊಲೀಸ್‌ ಅಧಿಕಾರಿಗಳ ಅಮಾನತು ಮಾಡಿರುವುದು ಸರಿಯಲ್ಲ. ಈ ಕೂಡಲೇ ಅಮಾನತು ಆದೇಶ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ವೇದಿಕೆಯ ಸಂಘಟನಾ ಕಾರ್ಯದರ್ಶಿ ಅರವಿಂದ್‌, ದೊಡ್ಡೇಗೌಡ, ರಾಜ್ಯ ಸಂಚಾಲಕ ಪಿ.ವಾಸು, ನರೇಂದ್ರ, ಜಿಲ್ಲಾ ಯುವ ಘಟಕದ ಅಧ್ಯಕ್ಷ ರಂಜಿತ್, ತಾಲ್ಲೂಕು ಘಟಕದ ಅಧ್ಯಕ್ಷ ವಿನಯ್, ಉಪಾಧ್ಯಕ್ಷ ಅಂಬರೀಶ್, ಅಶ್ವಥ್ ನಾರಾಯಣ್, ಪ್ರದೀಪ್ ಕುಮಾರ್, ತಾಲ್ಲೂಕು ಕಾರ್ಮಿಕ ಘಟಕದ ಅಧ್ಯಕ್ಷ ಶಿವಶಂಕರರೆಡ್ಡಿ, ಮುಖಂಡರಾದ ಶಿವಶಂಕರ್, ಶಿವಣ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.