ADVERTISEMENT

‌ಪಿಯು ಪರೀಕ್ಷೆ; ಉಪನಿರ್ದೇಶಕಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2020, 14:22 IST
Last Updated 15 ಜೂನ್ 2020, 14:22 IST
ವಿಜಯಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿದ್ದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಕಲಾವತಿ ಅವರನ್ನು ಥರ್ಮಲ್ ಸ್ಕ್ರೀನಿಂಗ್ ಯಂತ್ರದಿಂದ ಪರೀಕ್ಷೆ ಮಾಡಲಾಯಿತು
ವಿಜಯಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿದ್ದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಕಲಾವತಿ ಅವರನ್ನು ಥರ್ಮಲ್ ಸ್ಕ್ರೀನಿಂಗ್ ಯಂತ್ರದಿಂದ ಪರೀಕ್ಷೆ ಮಾಡಲಾಯಿತು   

ವಿಜಯಪುರ: ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆ ಜೂನ್‌18 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಕಲಾವತಿ ಅವರು ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.

ಈ ಕುರಿತು ಮಾತನಾಡಿದ ಅವರು, ಪರೀಕ್ಷೆಗೆ ಸಂಬಂಧಪಟ್ಟಂತೆ ಅಗತ್ಯವಾದ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿ ಪರೀಕ್ಷಾರ್ಥಿಯ ನಡುವೆ ಕಡ್ಡಾಯವಾಗಿ 6 ಅಡಿಗಳ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ. ಪರೀಕ್ಷಾರ್ಥಿಯ ಅಗತ್ಯಕ್ಕೆ ತಕ್ಕಂತೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಒಬ್ಬರಿಗೆ ನೀಡಿದ ಬಾಟಲಿಯನ್ನು ಮತ್ತೊಬ್ಬರಿಗೆ ನೀಡದಂತೆ ಕೊಠಡಿ ಮೇಲ್ವಿಚಾರಕರಿಗೆ ಸೂಚನೆ ನೀಡಲಾಗಿದ್ದು, ಪರೀಕ್ಷಾರ್ಥಿಗಳು ಕಡ್ಡಾಯವಾಗಿ ನೀರು ತರಲೇಬೇಕು ಎಂದು ಸರ್ಕಾರದ ನಿರ್ದೇಶನವಿದೆ ಅದನ್ನು ಪಾಲಿಸುವಂತೆ ವ್ಯವಸ್ಥೆ ಮಾಡಿದ್ದೇವೆ ಎಂದು ವಿವರಿಸಿದರು.

ಕೊರೊನಾ ಲಾಕ್ ಡೌನ್ ಸಮಯದಲ್ಲಿ ವಲಸೆ ಕಾರ್ಮಿಕರ ಮಕ್ಕಳು ಬೇರೆ ಜಿಲ್ಲೆಗಳಿಗೆ ಹೋಗಿದ್ದರೆ, ಅವರಿಗೆ ಸಮೀಪದಲ್ಲಿರುವ ಪರೀಕ್ಷಾ ಕೇಂದ್ರಗಳಲ್ಲಿ ಬರೆಯಲು ಅವಕಾಶ ಮಾಡಿಕೊಡಲಾಗುತ್ತಿದೆ. ನಮ್ಮ ಜಿಲ್ಲೆಯಿಂದ 12 ಮಂದಿ ಹೊರಗಿನ ಜಿಲ್ಲೆಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಪ್ರವೇಶವಾಗುತ್ತಿದ್ದಂತೆ ಥರ್ಮಲ್‌ ಸ್ಕ್ರೀನಿಂಗ್‌ ಮಾಡುವುದು, ಸ್ಯಾನಿಟೈಸರ್ ಬಳಕೆ ಮತ್ತು ಕಡ್ಡಾಯ ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.