ADVERTISEMENT

ಪಿಯು ಪರೀಕ್ಷೆ: ವಿದ್ಯಾರ್ಥಿಗಳಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2020, 13:48 IST
Last Updated 25 ಫೆಬ್ರುವರಿ 2020, 13:48 IST

ದೇವನಹಳ್ಳಿ: ದ್ವಿತೀಯ ಪಿಯು ಪರೀಕ್ಷೆಯು ಮಾರ್ಚ್ 4ರಿಂದ 23 ರವರೆಗೆ ನಡೆಯುವ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದೆ.

ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಫೋನ್‌ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್‌ ಸಾಧನಗಳ ಬಳಕೆಯನ್ನು ನಿಷೇಧಿಸಲಾಗಿದ್ದು, ಪರೀಕ್ಷಾ ಕೇಂದ್ರಕ್ಕೆ ಇಲಾಖೆಯು ನೀಡಿರುವ ಗುರುತಿನ ಚೀಟಿಯೊಂದಿಗೆ ಹಾಜರಾಗುವಂತೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದೆ. ಅಲ್ಲದೆ,ಪರೀಕ್ಷಾ ಕೇಂದ್ರದ ಅಧಿಕಾರಿ ಹಾಗೂ ಸಿಬ್ಬಂದಿಗಳೂ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಧರಿಸಬೇಕು ಎಂದೂ ತಿಳಿಸಿದೆ.

ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀ. ಪ್ರದೇಶ ನಿಷೇಧಿತ ವಲಯವಾಗಿದ್ದು,ಪರೀಕ್ಷೆಗೆ ಅಡ್ಡಿ ಉಂಟು ಮಾಡಿದರೆ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಲಾಗುವುದು. ನಕಲು ಮಾಡುವುದು, ನಕಲಿಗೆ ಸಹಾಯ ಮಾಡುವುದು, ಬದಲಿ ವ್ಯಕ್ತಿ ಪರೀಕ್ಷೆ ಬರೆಯುವುದು ಸೇರಿದಂತೆ ಇನ್ನಿತರ ಯಾವುದೇ ಅಕ್ರಮಗಳಿಗೂ ಅವಕಾಶ ಇರುವುದಿಲ್ಲ. ‌ಅಕ್ರಮಗಳಲ್ಲಿ ಭಾಗಿಯಾಗಿರುವುದು ಸಾಬೀತಾದರೆ ರಾಜ್ಯ ಶಿಕ್ಷಣ ತಿದ್ದುಪಡಿ ಕಾಯ್ದೆ ಅನ್ವಯ5 ವರ್ಷ ಜೈಲು ಅಥವಾ ₹ 5 ಲಕ್ಷ ದಂಡ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದೆ.

ADVERTISEMENT

ವಿದ್ಯಾರ್ಥಿಗಳು ಸಾಮಾನ್ಯ ಕೈ ಗಡಿಯಾರವನ್ನು (ಮುಳ್ಳು ಹೊಂದಿರುವ ‘ಅನಾಲಾಗ್‌’) ಧರಿಸಲು ಅನುಮತಿ ನೀಡಲಾಗಿದೆ ಎಂದು ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.