ದೇವನಹಳ್ಳಿ: 2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಜಿಲ್ಲೆಯು ಶೇ79.70ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ 8ನೇ ಸ್ಥಾನ ಪಡೆದಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ದ್ವಿತೀಯ ಪಿಯು ಪರೀಕ್ಷೆಗೆ ಹಾಜರಾದ 10935 ವಿದ್ಯಾರ್ಥಿಗಳ ಪೈಕಿ 8361 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಜಿಲ್ಲೆಯು ಶೇ76.46ರಷ್ಟು ಫಲಿತಾಂಶ ಬಂದಿದೆ. ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳಲ್ಲಿ 2024-25ನೇ ಸಾಲಿನಲ್ಲಿ ಮೊದಲ ಬಾರಿಗೆ ಪರೀಕ್ಷೆಗೆ ಹಾಜರಾದ 10354 ವಿದ್ಯಾರ್ಥಿಗಳ ಪೈಕಿ 8252 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ79.70ರಷ್ಟು ಫಲಿತಾಂಶ ಬಂದಿದೆ.
ಪರೀಕ್ಷೆಗೆ ಒಟ್ಟು 4893 ಬಾಲಕರು ಹಾಜರಾಗಿದ್ದು, 3530 ಬಾಲಕರು ತೇರ್ಗಡೆಯಾಗುವ ಮೂಲಕ ಶೇ 72.14ರಷ್ಟು ಫಲಿತಾಂಶ ಹಾಗೂ 6042 ಬಾಲಕಿಯರು ಪರೀಕ್ಷೆಗೆ ಹಾಜರಾಗಿದ್ದು, 4831 ಬಾಲಕಿಯರು ತೇರ್ಗಡೆ ಹೊಂದುವ ಮೂಲಕ ಶೇ79.96 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗದಿಂದ 1126 ವಿದ್ಯಾರ್ಥಿಗಳು ಹಾಜರಾಗಿದ್ದು, 527 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ46.8ರಷ್ಟು ಫಲಿತಾಂಶ ಬಂದಿದೆ. ವಾಣಿಜ್ಯ ವಿಭಾಗದಿಂದ 5249 ವಿದ್ಯಾರ್ಥಿಗಳು ಹಾಜರಾಗಿದ್ದು, 3959 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ75.42ರಷ್ಟು ಫಲಿತಾಂಶ ಸಿಕ್ಕಿದೆ.
ವಿಜ್ಞಾನ ವಿಭಾಗದಿಂದ 4560 ವಿದ್ಯಾರ್ಥಿಗಳು ಹಾಜರಾಗಿದ್ದು, 3875 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ84.98ರಷ್ಟು ಫಲಿತಾಂಶ ಬಂದಿದೆ. ನಗರ ಪ್ರದೇಶದ 8479 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 6531 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ77.03ರಷ್ಟು ಫಲಿತಾಂಶ ದೊರೆತಿದೆ. ಗ್ರಾಮೀಣ ಪ್ರದೇಶದ 2456 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 1830 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ 74.51 ರಷ್ಟು ಫಲಿತಾಂಶ ಬಂದಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.