ADVERTISEMENT

ಆನೇಕಲ್‌: ಕೈಗಾರಿಕಾ ಪ್ರದೇಶದ ಸುರಕ್ಷತೆ ಪರಿಶೀಲಿಸಿದ ಆರ್‌ಎಎಫ್‌

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2021, 9:26 IST
Last Updated 26 ಆಗಸ್ಟ್ 2021, 9:26 IST
ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶಕ್ಕೆ ರ‍್ಯಾಪಿಡ್ ಆಕ್ಷನ್ ಫೋರ್ಸ್‌ (ಆರ್‌ಎಎಫ್) ಅಧಿಕಾರಿಗಳ ತಂಡ ಭೇಟಿ ನೀಡಿ ಭದ್ರತೆ ದೃಷ್ಟಿಯಿಂದ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲಿಸಿತು
ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶಕ್ಕೆ ರ‍್ಯಾಪಿಡ್ ಆಕ್ಷನ್ ಫೋರ್ಸ್‌ (ಆರ್‌ಎಎಫ್) ಅಧಿಕಾರಿಗಳ ತಂಡ ಭೇಟಿ ನೀಡಿ ಭದ್ರತೆ ದೃಷ್ಟಿಯಿಂದ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲಿಸಿತು   

ಆನೇಕಲ್: ಕೈಗಾರಿಕಾ ಪ್ರದೇಶಗಳಲ್ಲಿ ಭದ್ರತೆಯ ದೃಷ್ಟಿಯಿಂದ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲಿಸುವ ಸಲುವಾಗಿ ರ‍್ಯಾಪಿಡ್‌ ಆಕ್ಷನ್‌ ಫೋರ್ಸ್‌ನ (ಆರ್‌ಎಎಫ್‌) ಅಧಿಕಾರಿಗಳ ತಂಡವು ಹೆಬ್ಬಗೋಡಿ ಪೊಲೀಸರು ಮತ್ತು ಬೊಮ್ಮಸಂದ್ರ ಕೈಗಾರಿಕಾ ಸಂಘದೊಂದಿಗೆ ಕೈಗಾರಿಕಾ ಪ್ರದೇಶಗಳ ಪರಿಶೀಲನೆ ನಡೆಸಿತು ಎಂದು ಹೆಬ್ಬಗೋಡಿ ಸರ್ಕಲ್‌ ಇನ್‌ಸ್ಪೆಕ್ಟರ್‌ ಗೌತಮ್‌ ತಿಳಿಸಿದರು.

ಕಮಾಂಡರ್‌ ಮನೋಜ್‌ ನೇತೃತ್ವದ ಅಧಿಕಾರಿಗಳ ತಂಡ ಬೊಮ್ಮಸಂದ್ರ, ಅತ್ತಿಬೆಲೆ, ಜಿಗಣಿ, ವೀರಸಂದ್ರ ಕೈಗಾರಿಕಾ ಪ್ರದೇಶಗಳಿಗೆ ಭೇಟಿ ನೀಡಿ ಈ ಪ್ರದೇಶಗಳಲ್ಲಿ ಭದ್ರತೆ ಕೈಗೊಳ್ಳಲು ಪೊಲೀಸರು ಮತ್ತು ಕೈಗಾರಿಕಾ ಸಂಘಗಳ ಜೊತೆಗೂಡಿ ಕೆಲಸ ಮಾಡುವ ಸಂಬಂಧ ಚರ್ಚಿಸಿತು.

ಕೈಗಾರಿಕಾ ಸಂಘದ ಅಧ್ಯಕ್ಷ ಎ. ಪ್ರಸಾದ್‌ ಮಾತನಾಡಿ, ಕೈಗಾರಿಕಾ ಪ್ರದೇಶದಲ್ಲಿ ಭದ್ರತೆಯು ಅತ್ಯಂತ ಅವಶ್ಯಕವಾಗಿದ್ದು ಈ ದೃಷ್ಟಿಯಿಂದ ಆರ್‌ಎಎಫ್‌ಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಕೆಐಎಡಿಬಿ ವತಿಯಿಂದ ಜಾಗ ಮಂಜೂರು ಮಾಡಿಸಿಕೊಂಡು ಆರ್‌ಎಎಫ್‌ಗೆ ಕಚೇರಿ ಮತ್ತು ಸಿಬ್ಬಂದಿಗೆ ವಸತಿ ಗೃಹಗಳನ್ನು ನಿರ್ಮಿಸಲು ಸಂಘ ನೆರವು ನೀಡಲಿದೆ ಎಂದು ತಿಳಿಸಿದರು.

ADVERTISEMENT

ಸಬ್‌ ಇನ್‌ಸ್ಪೆಕ್ಟರ್‌ ವೆಂಕಟೇಶ್‌, ಕಮಾಂಡರ್‌ ಮನೋಜ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.