ADVERTISEMENT

ದೊಡ್ಡಬಳ್ಳಾಪುರ: ರಾತ್ರಿ ಸುರಿದ ಮಳೆಗೆ ಮನೆ ಕುಸಿತ, ಕೋಡಿ ಬಿದ್ದ ಕೆರೆಗಳು

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2019, 7:10 IST
Last Updated 12 ಅಕ್ಟೋಬರ್ 2019, 7:10 IST
ಶುಕ್ರವಾರ ರಾತ್ರಿ ಸುರಿದ ಮಳೆಗೆ ಮನೆ ಬಿದ್ದಿರುವುದು.
ಶುಕ್ರವಾರ ರಾತ್ರಿ ಸುರಿದ ಮಳೆಗೆ ಮನೆ ಬಿದ್ದಿರುವುದು.   

ದೊಡ್ಡಬಳ್ಳಾಪುರ: ತಾಲ್ಲೂಕಿನಲ್ಲಿ ಶುಕ್ರವಾರ ರಾತ್ರಿ ಸುರಿದ ಬಾರಿ ಮಳೆಗೆ ಮನೆಗಳು ಕುಸಿದು ಬಿದ್ದಿವೆ. ನಂದಿ ಬೆಟ್ಟದ ತಪ್ಪಲಿನ ಮೂರು ಕೆರೆಗಳು ಕೋಡಿ ಬಿದ್ದಿವೆ.

ಅರ್ಕಾವತಿ ನದಿ ಪಾತ್ರದಲ್ಲಿ ಬರುವ ಪ್ರಮುಖ ಕೆರೆಗಳಾದ ನಾಗರಕೆರೆ ಮುಕ್ಕಾಲು ಭಾಗದಷ್ಟು ತುಂಬಿದೆ. ಇದೇ ಸಾಲಿನಲ್ಲಿ ಬರುವ ಚಿಕ್ಕತುಮಕೂರು, ದೊಡ್ಡತುಮಕೂರು ಕೆರೆಗಳು ತುಂಬಿ ಕೋಡಿ ಹರಿಯುತ್ತಿವೆ.

ತಾಲ್ಲೂಕಿನ ತಳಗವಾರದಲ್ಲಿ ಐದು ಮನೆಗಳು ಕುಸಿದಿವೆ. ಯಾವುದೇ ಪ್ರಾಣಹಾನಿಯಾಗಿಲ್ಲ. ತಾಲ್ಲೂಕಿನ ಬಹುತೇಕ ಕಡೆಗಳಲ್ಲಿ ಬೆಳೆದು ನಿಂತಿದ್ದ ರಾಗಿ ಬೆಳೆ ನೆಲಕಚ್ಚಿದೆ.

ADVERTISEMENT
ಮಳೆಗೆ ಮನೆಯ ಗೋಡೆ ಕುಸಿದಿರುವುದು.

ನಗರದಲ್ಲಿ ಅಂದಿನ ಜಿಲ್ಲಾಧಿಕಾರಿ ಸಿ.ಎಸ್.ಕರೀಗೌಡರ ನೇತೃತ್ವದಲ್ಲಿ ಸಾರ್ವಜನಿಕರ ಸಹಾಭಾಗಿತ್ವದಲ್ಲಿ ಅಭಿವೃದ್ಧಿಗೊಳಿಸಲಾಗಿದ್ದ ರೋಜಿಪುರ, ಗಗನಾರ್ಯ ಮಠದ ಕಲ್ಯಾಣಿಗಳಲ್ಲಿ ಮಳೆ ನೀರು ತುಂಬಿವೆ. ತಾಲ್ಲೂಕಿನ ಬಹುತೇಕ ಕೆರೆಗಳಿಗೆ ಅರ್ಧಕ್ಕು ಹೆಚ್ಚಿನ ಭಾಗ ನೀರು ಸಂಗ್ರಹವಾಗಿವೆ.

ಹೊಂಡದಲ್ಲಿ ಮಳೆ ನೀರು ಸಂಗ್ರಹವಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.