ADVERTISEMENT

ಮಳೆ: ಕುಸಿದ ಮನೆಗಳು

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2021, 4:56 IST
Last Updated 21 ನವೆಂಬರ್ 2021, 4:56 IST
ದೊಡ್ಡಬಳ್ಳಾಪುರ ರೋಜಿಪುರದಲ್ಲಿ ಮಳೆಯಿಂದಾಗಿ ಕುಸಿದು ಬಿದ್ದಿರುವ ಮನೆಗಳಿಗೆ ಶಾಸಕ ಟಿ.ವೆಂಕಟರಮಣಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು
ದೊಡ್ಡಬಳ್ಳಾಪುರ ರೋಜಿಪುರದಲ್ಲಿ ಮಳೆಯಿಂದಾಗಿ ಕುಸಿದು ಬಿದ್ದಿರುವ ಮನೆಗಳಿಗೆ ಶಾಸಕ ಟಿ.ವೆಂಕಟರಮಣಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು   

ದೊಡ್ಡಬಳ್ಳಾಪುರ: ತಾಲ್ಲೂಕಿನಲ್ಲಿ ಶನಿವಾರ ಮಳೆಯ ಆರ್ಭಟ ಮುಂದುವರೆದಿದ್ದು ಹಲವು ಕೆರೆಗಳು ಕೋಡಿ ಹರಿದಿದೆ.

ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿಗಾಗಿ ಕೆರೆ ಅಂಗಳದಲ್ಲಿ ಕೊರೆಸಲಾಗಿದ್ದ ಕೊಳವೆಬಾವಿಗಳು ನೀರಿನಲ್ಲಿ ಮುಳುಗಿವೆ. ಕೊಳವೆ ಬಾವಿಗಳಿಗೆ ಅಳವಡಿಸಲಾಗಿದ್ದ ವಿದ್ಯುತ್‌ ತಂತಿಗಳು ತುಂಡಾಗಿವೆ. ಅಲ್ಲದೆ, ಕೆರೆ ಅಂಗಳದಲ್ಲಿನ ವಿದ್ಯುತ್‌ ಪರಿವರ್ತಕ ಮುಳುಗುವ ಸ್ಥಿತಿ ಇದೆ. ಇವುಗಳ ದುರಸ್ತಿ, ಕತ್ತರಿಸಿ ಬಿದ್ದಿರುವ ವಿದ್ಯುತ್‌ ತಂತಿಗಳನ್ನು ದುರಸ್ತಿ ಮಾಡಲು ಬೆಸ್ಕಾಂ ಸಿಬ್ಬಂದಿ ಹರಸಾಹಸ
ಪಡುವಂತಾಗಿದೆ.

ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ ಮನೆ ಕುಸಿದು ಬಿದ್ದಿದೆ. ಹಾಗೆಯೇ ನಗರದಲ್ಲಿನ ರೋಜಿಪುರ, ಸಂಜಯನಗರ ಸೇರಿದಂತೆ ಹಲವು ವಾರ್ಡ್‌ಗಳಲ್ಲಿ ಮನೆಗಳು ಕುಸಿದು ಬಿದ್ದಿವೆ.ನಗರದಲ್ಲಿ ಮಳೆಯಿಂದಾಗಿ ಕುಸಿದು ಬಿದ್ದಿರುವ ಮನೆಗಳಿಗೆ ಸೂಕ್ತ ಪರಿಹಾರ ಕೊಡಿಸುವುದಾಗಿಶಾಸಕ ಟಿ.ವೆಂಕಟರಮಣಯ್ಯ ಭರವಸೆ ನೀಡಿದರು.

ADVERTISEMENT

ಶಾಲೆಗಳು ಆರಂಭವಾದ ಮೇಲೆ ಪೋಷಕರು ತಮ್ಮ ಮಕ್ಕಳ ಮೇಲೆ ತೀವ್ರ ನಿಗಾವಹಿಸಬೇಕು. ಕೆರೆಗಳು ಕೋಡಿ ಬಿದ್ದಿರುವುದರಿಂದ ಸಹಜವಾಗಿಯೇ ನೀರಿನಲ್ಲಿ ಆಟವಾಡಲು ಮಕ್ಕಳು ಹೋಗಿ ಅನಾಹುತವಾಗುವುದನ್ನು ತಡೆಯಬೇಕಿದೆ ಎಂದು ಪೊಲೀಸರು ಮುನ್ನೆಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.