ADVERTISEMENT

ಸರಳವಾಗಿ ‘ಅಣ್ಣಾವ್ರ’ ಜನ್ಮ ದಿನಾಚರಣೆ

ಕನ್ನಡದ ಹೋರಾಟಗಳಿಗೆ ಪ್ರೇರಕ ಶಕ್ತಿಯಾಗಿದ್ದ ಡಾ. ರಾಜ್‌ಕುಮಾರ್‌

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2021, 4:02 IST
Last Updated 25 ಏಪ್ರಿಲ್ 2021, 4:02 IST
ಡಾ.ರಾಜ್‍ಕುಮಾರ್ ಹುಟ್ಟುಹಬ್ಬದ ಅಂಗವಾಗಿ ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘ ಹಾಗೂ ಕನ್ನಡಪರ ಸಂಘಟನೆಗಳಿಂದ ರಾಜ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು
ಡಾ.ರಾಜ್‍ಕುಮಾರ್ ಹುಟ್ಟುಹಬ್ಬದ ಅಂಗವಾಗಿ ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘ ಹಾಗೂ ಕನ್ನಡಪರ ಸಂಘಟನೆಗಳಿಂದ ರಾಜ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು   

ದೊಡ್ಡಬಳ್ಳಾಪುರ: ಡಾ.ರಾಜ್‍ಕುಮಾರ್ ಅವರ 92ನೇ ಜನ್ಮ ದಿನಾಚರಣೆ ನಗರದಲ್ಲಿ ಕೊರೊನಾ ಹಿನ್ನೆಲೆಯಲ್ಲಿ ಶನಿವಾರ ಸರಳವಾಗಿ ಆಚರಿಸಲಾಯಿತು.

ತಾಲ್ಲೂಕು ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘ, ತಾಲೂಕು ಶಿವರಾಜ್‍ಕುಮಾರ್ ಕನ್ನಡ ಸೇನಾ ಸಮಿತಿ ಹಾಗೂ ವಿವಿಧ ಕನ್ನಡಪರ ಸಂಘಟನೆಗಳಿಂದ ನಗರದ ಜಯಚಾಮರಾಜೇಂದ್ರ ವೃತ್ತದಲ್ಲಿನ ಡಾ.ರಾಜ್‌ಕುಮಾರ್‌ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.

ಸಾಮಾಜಿಕ ಕಳಕಳಿ ಹಾಗೂ ಜೀವನ ಮೌಲ್ಯಗಳನ್ನು ಬಿಂಬಿಸುವ ಚಿತ್ರಗಳು ವಿರಳವಾಗುತ್ತಿರುವ ಇಂದಿನ ದಿನಗಳಲ್ಲಿ ಡಾ.ರಾಜ್ ಚಿತ್ರಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸಬೇಕಿದೆ. ಗೋಕಾಕ್ ಚಳವಳಿ ಮೊದಲಾಗಿ ಕನ್ನಡದ ಹೋರಾಟಗಳಿಗೆ ಪ್ರೇರಕ ಶಕ್ತಿಯಾಗಿದ್ದ ರಾಜ್‍ಕುಮಾರ್ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕಿದೆ ರಾಜ್‌ ಅಭಿಮಾನಿಗಳು ಸ್ಮರಿಸಿದರು.

ADVERTISEMENT

ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸು.ನರಸಿಂಹಮೂರ್ತಿ, ಪ್ರಧಾನ ಕಾರ್ಯದರ್ಶಿ ಸುರೇಶ್‍ರಾವ್, ಖಜಾಂಚಿ ಡಿ.ಎನ್.ತಿಮ್ಮರಾಜು, ಸಂಘಟನಾ ಕಾರ್ಯದರ್ಶಿ ವಿ.ಪರಮೇಶ್, ತಾಲ್ಲೂಕು ಶಿವರಾಜ್‍ಕುಮಾರ್ ಸೇನಾ ಸಮಿತಿಯ ತಾಲ್ಲೂಕು ಅಧ್ಯಕ್ಷ ಜೆ.ಆರ್.ರಮೇಶ್, ಉಪಾಧ್ಯಕ್ಷ ಜಿ.ರಾಮು, ಕನ್ನಡ ಪಕ್ಷ ಅಧ್ಯಕ್ಷ ಎಂ.ಸಂಜೀವ್‌ನಾಯಕ್, ಪ್ರಧಾನ ಕಾರ್ಯದರ್ಶಿ ಡಿ.ಪಿ.ಆಂಜನೇಯ, ಕರವೇ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ, ಮಂಜುನಾಥ್, ಪ್ರಕಾಶ್‌ರಾವ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.