ADVERTISEMENT

ರಾಜ್‌ ನೆನಪಲ್ಲಿ ಯುವಕರ ರಕ್ತದಾನ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2021, 4:02 IST
Last Updated 25 ಏಪ್ರಿಲ್ 2021, 4:02 IST
ರಕ್ತದಾನ ಶಿಬಿರದಲ್ಲಿ ಡಾ.ರಮೇಶ್‌ಗೌಡ ಅಭಿನಂದನಾ ಪತ್ರ ಹಾಗೂ ಕನ್ನಡ ಸಾಹಿತ್ಯದ ಕೃತಿಗಳನ್ನು ವಿತರಿಸಿದರು
ರಕ್ತದಾನ ಶಿಬಿರದಲ್ಲಿ ಡಾ.ರಮೇಶ್‌ಗೌಡ ಅಭಿನಂದನಾ ಪತ್ರ ಹಾಗೂ ಕನ್ನಡ ಸಾಹಿತ್ಯದ ಕೃತಿಗಳನ್ನು ವಿತರಿಸಿದರು   

ದೊಡ್ಡಬಳ್ಳಾಪುರ: ನಗರದ ಖಾಸ್‍ಬಾಗ್‍ನಲ್ಲಿನ ಶ್ರೀಗಂಗಾ, ಭಗತ್ ಸಿಂಗ್-ಚಂದ್ರಶೇಖರ್ ಆಜಾದ್ ಆಸ್ಪತ್ರೆಯಲ್ಲಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಶನಿವಾರ ಡಾ.ರಾಜ್‍ಕುಮಾರ್ 92ನೇ ಜನ್ಮ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ ನಡೆಯಿತು.

ಕೊರೊನಾ ಸೋಂಕು ಹರಡುವ ಹಿನ್ನೆಲೆಯಲ್ಲಿ ರಕ್ತದಾನ ಶಿಬಿರದಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂತರ ಕಾಯ್ದುಕೊಂಡು, ದಾನಿಗಳಿಂದ ರಕ್ತ ಸಂಗ್ರಹಿಸಲಾಯಿತು.

ಗಂಗಾ, ಭಗತ್ ಸಿಂಗ್-ಚಂದ್ರಶೇಖರ್ ಆಜಾದ್ ಆಸ್ಪತ್ರೆ ಮುಖ್ಯಸ್ಥ ಡಾ.ರಮೇಶ್‌ಗೌಡ ಮಾತನಾಡಿ, 12 ವರ್ಷಗಳಿಂದ ರಾಜ್ನೆನಪಿನಲ್ಲಿ ರಕ್ತದಾನ ಶಿಬಿರ ನಡೆಸಲಾಗುತ್ತಿದೆ. ಕನ್ನಡ ಚಿತ್ರರಂಗಕ್ಕೆ ರಾಜ್ ಅವರ ಕೊಡುಗೆ ಅನನ್ಯವಾಗಿದ್ದು, ರಾಜ್‌ ಹೆಸರಿನಲ್ಲಿ ರಕ್ತದಾನದಂತಹ ಸಾಮಾಜಿಕ ಸೇವೆ ಮಾಡುತ್ತಿರುವುದು ಸಂತಸ ತಂದಿದೆ ಎಂದರು.

ADVERTISEMENT

ಆಸ್ಪತ್ರೆಯ ವೈದ್ಯೆ ಡಾ.ವಿಜಯಲಕ್ಷ್ಮಿ, ತಾಲ್ಲೂಕು ಶಿವರಾಜ್‍ಕುಮಾರ್ ಕನ್ನಡ ಸೇನಾ ಸಮಿತಿ ಅಧ್ಯಕ್ಷ ಜೆ.ಆರ್.ರಮೇಶ್, ಉಪಾಧ್ಯಕ್ಷ ಜಿ.ರಾಮು, ಕರವೇ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ ಇದ್ದರು.

ಶಿಬಿರದಲ್ಲಿ ರಕ್ತದಾನ ಮಾಡಿದ ರಕ್ತದಾನಿಗಳಿಗೆ ಅಭಿನಂದನಾ ಪತ್ರ ಹಾಗೂ ಕನ್ನಡ ಸಾಹಿತ್ಯದ ಕೃತಿಗಳನ್ನು ಉಡುಗರೆಯಾಗಿ ನೀಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.