ADVERTISEMENT

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2022, 6:05 IST
Last Updated 1 ನವೆಂಬರ್ 2022, 6:05 IST
ಗೋಪಿನಾಥ್
ಗೋಪಿನಾಥ್   

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹತ್ತು ಸಾಧಕರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.

ಸಂಗೀತ ಕ್ಷೇತ್ರದಿಂದ ದೇವನಹಳ್ಳಿಯ ಬಿ.ಕೆ. ಗೋಪಾಲ್ ಮಾಸ್ಟರ್, ರಂಗಭೂಮಿ ಕ್ಷೇತ್ರದಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಕಂಟನಕುಂಟೆ ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ಕೆ.ಎಂ. ಕೃಷ್ಣಮೂರ್ತಿ, ಜಾನಪದ ಕ್ಷೇತ್ರದಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ಯಾಕಲದೇವನಪುರ ವಿ. ರಾಮಚಂದ್ರ, ಕ್ರೀಡಾ ವಿಭಾಗದಿಂದ ಷಟಲ್ ಬ್ಯಾಡ್ಮಿಂಟನ್‌ ಆಟಗಾರ ದೇವನಹಳ್ಳಿಯ ಡಿ.ಎಂ. ವೇಣುಗೋಪಾಲ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕೃಷಿ ಕ್ಷೇತ್ರದಿಂದ ದೇವನಹಳ್ಳಿ ತಾಲ್ಲೂಕಿನ ಯಲಿಯೂರು ಗ್ರಾಮದ ವೈ.ಎ. ದೇವರಾಜ್, ಸಾಹಿತ್ಯ ಕ್ಷೇತ್ರದಿಂದ ದೇವನಹಳ್ಳಿ ತಾಲ್ಲೂಕಿನ ವಿಜಯಪುರದ ಮಾ. ಸುರೇಶ್ ಬಾಬು, ಸಮಾಜ ಸೇವಾ ಕ್ಷೇತ್ರದಿಂದ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆಯ ಬೆಟ್ಟಹಳ್ಳಿ ಗೋಪಿನಾಥ್, ಕ್ರೀಡಾ (ಏರ್ ರೈಪಲ್ ಶೂಟಿಂಗ್) ಕ್ಷೇತ್ರದಿಂದ ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಕಚೇರಿಯ ಪ್ರಥಮದರ್ಜೆ ಸಹಾಯಕರಾದ ಕುಮಾರಿ ಯುಕ್ತಿ ರಾಜೇಂದ್ರ, ಸಾಮಾಜಿಕ ನಾಟಕ ಕ್ಷೇತ್ರದಿಂದ ನೆಲಮಂಗಲ ಟೌನಿನ ರಂಗಭೂಮಿ ನಟ ಹಾಗೂ ನಿರ್ದೇಶಕ ಬಿ. ರಾಮಯ್ಯ, ಕ್ರೀಡಾ ಕ್ಷೇತ್ರದಿಂದ ದೊಡ್ಡಬಳ್ಳಾಪುರದ ಬಿ.ಎಸ್. ಶ್ರೀಕಂಠಮೂರ್ತಿ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.

ADVERTISEMENT

ಈ ಎಲ್ಲಾ ಸಾಧಕರಿಗೆ ನ. 1ರಂದು ಪಟ್ಟಣದ ಜೂನಿಯರ್ ಕಾಲೇಜು ಆಟದ ಮೈದಾನದಲ್ಲಿ ನಡೆಯುವ ಜಿಲ್ಲಾ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.

ಸಮಾರಂಭ ಇಂದು

ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿಯಿಂದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನ. 1ರಂದು ಬೆಳಿಗ್ಗೆ 9ಗಂಟೆಗೆ ಪಟ್ಟಣದ ಕ್ರೀಡಾಂಗಣದಲ್ಲಿ ನಡೆಯಲಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕ ನಿಸರ್ಗ ನಾರಾಯಣಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ.

ಪೌರಾಡಳಿತ ಸಚಿವ ಎಂ.ಟಿ.ಬಿ. ನಾಗರಾಜ್, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಬಿ.ಎನ್. ಬಚ್ಚೇಗೌಡ, ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎ. ರವಿ, ದೊಡ್ಡಬಳ್ಳಾಪುರ ಶಾಸಕ ಟಿ. ವೆಂಕಟರಮಣಯ್ಯ, ನೆಲಮಂಗಲ ಶಾಸಕ ಡಾ.ಕೆ. ಶ್ರೀನಿವಾಸಮೂರ್ತಿ, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಅ. ದೇವೇಗೌಡ, ಎಸ್. ರವಿ, ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಕೆ.ಪಿ. ಮೋಹನ್ ರಾಜ್, ದೇವನಹಳ್ಳಿ ಪುರಸಭೆ ಅಧ್ಯಕ್ಷೆ ಡಿ. ಗೋಪಮ್ಮ, ಉಪಾಧ್ಯಕ್ಷೆ ಕೆ. ಗೀತಾ ಶ್ರೀಧರ್, ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಬಿ.ಎನ್. ಕೃಷ್ಣಪ್ಪ, ಜಿಲ್ಲಾಧಿಕಾರಿ ಆರ್. ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ. ರೇವಣಪ್ಪ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.