ADVERTISEMENT

ಸಾರ್ವಜನಿಕ ಸ್ಥಳಗಳಲ್ಲಿ ರಾಮನವಮಿ ನಿಷೇಧ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2021, 5:27 IST
Last Updated 21 ಏಪ್ರಿಲ್ 2021, 5:27 IST

ದೊಡ್ಡಬಳ್ಳಾಪುರ: ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಶ್ರೀ ರಾಮನವಮಿ ಹಬ್ಬವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜನತೆ ಸಾರ್ವಜನಿಕವಾಗಿ ಗುಂಪುಗೂಡಿ ಆಚರಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿ,ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬದ ಆಚರಣೆ,ಮಜ್ಜಿಗೆ,ಪಾನಕ ವಿನಿಮಯ ಮಾಡುವಂತಿಲ್ಲ. ಸಾರ್ವಜನಿಕರು ತಮ್ಮ ಮನೆಗಳಲ್ಲಿಯೇ ಶ್ರೀ ರಾಮನವಮಿಯನ್ನು ಸರಳವಾಗಿ ಆಚರಣೆ ಮಾಡುವ ಮೂಲಕ ಕೋವಿಡ್ ಸೋಂಕಿನ ಹರಡುವಿಕೆ ನಿಯಂತ್ರಣಕ್ಕೆ ಸಹಕಾರ ನೀಡಬೇಕು. ಆದೇಶ ಉಲ್ಲಂಘಿಸುವವರ ವಿರುದ್ಧ ಆಯಾ ತಾಲ್ಲೂಕಿನಲ್ಲಿ ತಹಶೀಲ್ದಾರ್, ಪುರಸಭೆ,ನಗರಸಭೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT