
ದೊಡ್ಡಬಳ್ಳಾಪುರ: ವಾಲ್ಮೀಕಿ ಜನಾಂಗದ ಬಗ್ಗೆ ನಿಂದನಾತ್ಮಕ ಹೇಳಿಕೆ ನೀಡಿರುವ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಎಸ್.ಸಿ, ಎಸ್.ಟಿ ದೌರ್ಜನ್ಯ ಕಾಯ್ದೆಯಡಿ ಜಾತಿ ನಿಂದನೆ ಪ್ರಕರಣ ದಾಖಲು ಮಾಡುವಂತೆ ವಾಲ್ಮೀಕಿ ಸಮುದಾಯದ ಮುಖಂಡರು ಡಿವೈಎಸ್‌ಪಿ ರವಿ ಅವರಿಗೆ ಶುಕ್ರವಾರ ದೂರು ನೀಡಿದರು.
ಮಾಜಿ ಸಂಸದ ರಮೇಶ್ ಕತ್ತಿ ಅವರು ವಾಲ್ಮೀಕಿ ಜನಾಂಗದವರ ಜಾತಿಯನ್ನು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಸಾರ್ವಜನಿಕರ ಹಿತಾಸಕ್ತಿ ಕಾಪಾಡಬೇಕಾದ ಜವಾಬ್ದಾರಿಯುತ ವ್ಯಕ್ತಿಗಳೇ ಹೀನಾಯವಾಗಿ ನಡೆದುಕೊಂಡಿರುವುದು ಕಾನೂನು ವಿರುದ್ಧವಾಗಿದೆ. ಇವರ ವಿರುದ್ಧ ದೌರ್ಜನ್ಯ ಕಾಯ್ದೆಯಡಿ ಎಫ್‌ಐಆರ್ ದಾಖಲು ಮಾಡಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ವಾಲ್ಮೀಕಿ ಸಂಘದ ತಾಲ್ಲೂಕು ಅಧ್ಯಕ್ಷ ಮುನಿಕೃಷ್ಣ, ಗೌರವ ಅಧ್ಯಕ್ಷ ಪ್ರೇಮ್ ಕುಮಾರ್ ಒತ್ತಾಯಿಸಿದರು.
ವಾಲ್ಮೀಕಿ ಸಂಘದ ತಾಲ್ಲೂಕು ಉಪಾಧ್ಯಕ್ಷ ಸಿ.ಕುಮಾರ್, ತಾಲ್ಲೂಕು ನಿರ್ದೆಶಕರಾದ ರಾಮಚಂದ್ರಪ್ಪ, ವೆಂಕಟಾಚಲಯ್ಯ, ನಗರ ಅಧ್ಯಕ್ಷ ಕೇಶವಮೂರ್ತಿ, ನಗರ ಪ್ರಧಾನ ಕಾರ್ಯದರ್ಶಿ ಕೆ.ಕೃಷ್ಣಮೂರ್ತಿ, ರಾಜು, ವೆಂಕಟೇಶ್, ಯುವ ಮುಖಂಡ ರಮೇಶ್‌ಬಾಬು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.